ETV Bharat / state

ವಿಧಾನಸೌಧ ಮುತ್ತಿಗೆ ಕೈಬಿಟ್ಟು ಮತ್ತೊಂದು ಗಡುವು ನೀಡಿದ ಕೂಡಲಸಂಗಮ ಶ್ರೀ

author img

By

Published : Nov 25, 2022, 10:13 AM IST

Basava Jayamrityunjaya Shri of Koodalasangama Peetha
ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸೌಧ ಮುತ್ತಿಗೆ ಹಾಕುವ ಹೋರಾಟವನ್ನು ಕೈಬಿಟ್ಟಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಶ್ರೀ ಹೇಳಿದರು.

ಬೆಂಗಳೂರು: ಸಿಎಂ ಭರವಸೆಯ ಮೇರೆಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಡಿಸೆಂಬರ್ 12 ರಂದು ವಿಧಾನಸೌಧ ಮುತ್ತಿಗೆ ಹಾಕುವ ನಿರ್ಧಾರ ಕೈಬಿಟ್ಟಿದ್ದೇವೆ. ಆದರೆ ನಮ್ಮ ಬೇಡಿಕೆಯನ್ನು ಕಡೆಗಣಿಸಿದಲ್ಲಿ ಬೆಳಗಾವಿ ಅಧಿವೇಶನದ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀ ಎಚ್ಚರಿಕೆ ನೀಡಿದರು.

ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಪಂಚಮಸಾಲಿ ನಿಯೋಗ ಭೇಟಿ ಮಾಡಿತು. ಸ್ವಾಮೀಜಿ ನೇತೃತ್ವದಲ್ಲಿ ಸಚಿವ ಸಿ.ಸಿ ಪಾಟೀಲ್, ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಒಳಗೊಂಡ ನಿಯೋಗ ಸಿಎಂ ಜೊತೆ ಚರ್ಚೆ ನಡೆಸಿತು. 2ಎ ಮೀಸಲಾತಿ ನೀಡುವಂತೆ ಸತತವಾಗಿ ಹೋರಾಟ ಮಾಡಿದರೂ ಸರ್ಕಾರ ಮಣಿದಿಲ್ಲ, ಹಲವು ಬಾರಿ ಡೆಡ್ ಲೈನ್ ನೀಡಿದರೂ ಸ್ಪಂದಿಸಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಕಳೆದ ಎರಡು ವರ್ಷಗಳಿಂದ ಮೀಸಲಾತಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಡಿಸೆಂಬರ್ 12ಕ್ಕೆ ವಿಧಾನಸೌದ ಮುತ್ತಿಗೆ ಹಾಕಲು ತಯಾರಾಗಿದ್ದೆವು. ಆದರೆ ನಮ್ಮ ಸಮುದಾಯದವರ ಜೊತೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ಮುತ್ತಿಗೆ ಹಾಕಬೇಡಿ, ಸರ್ಕಾರಕ್ಕೆ ಮುಜುಗರ ಆಗುತ್ತದೆ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಡಿಸೆಂಬರ್ 12ಕ್ಕೆ ಮಾಡುವ ಬೃಹತ್‌ ಹೋರಾಟದ ಬದಲಾಗಿ ಬೆಳಗಾವಿ ಅಧಿವೇಶನ ನಡೆಯುವ ಒಳಗಾಗಿ ಶಾಶ್ವತ ಹಿಂದುಳಿದ ಆಯೋಗದಿಂದ ವರದಿ ತರಸಿಕೊಳ್ಳಬೇಕಾಗಿ ಹೇಳಿದ್ದೇವೆ. ಸಿಎಂ ಕೂಡ ಅಷ್ಟರೊಳಗೆ ವರದಿ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಇಲ್ಲವಾದರೆ ನಾವು ಅಧಿವೇಶನದ ದಿನ ಬೆಳಗಾವಿಯಲ್ಲಿ ಮುತ್ತಿಗೆ ಹಾಕುತ್ತೇವೆ ಎಂದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ ಎಂದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.