ETV Bharat / state

ಜಲಧಾರೆ ಸಮಾವೇಶಕ್ಕೂ ಮುನ್ನ ತಂದೆ-ತಾಯಿ ಆಶೀರ್ವಾದ ಪಡೆದ ಕುಮಾರಸ್ವಾಮಿ

123ರ ಗುರಿ ಹೇಳಿದಾಗ ಬಹಳ ಜನ ಕೇವಲವಾಗಿ ಮಾತನಾಡಿದ್ದಾರೆ. ರೈತರ ಸಾಲಮನ್ನಾ ಮಾಡುತ್ತೇನೆ ಎಂದಾಗಲೂ ಮಾತನಾಡಿದ್ದರು. ರೈತರ ಸಾಲಮನ್ನಾ ಮಾಡಿ ಸಾಬೀತು ಮಾಡಿದ್ದೇನೆ. ಈ ಬಾರಿ 123ರ ಗುರಿ ಜೊತೆಗೆ ರಾಜ್ಯದ ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಕನ್ನಡತನ ಇರುವ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇಂತಹ ಸರ್ಕಾರ ಪ್ರತಿಷ್ಠಾಪನೆಯಾಗಲು ನಾಡಿನ ಜನತೆ ಆಶೀರ್ವಾದ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು..

kumaraswamy-takes-blessing-from-parents-before-janata-jaladhare-program
ಜಲಧಾರೆ ಸಮಾವೇಶಕ್ಕೂ ಮುನ್ನ ತಂದೆ-ತಾಯಿ ಆಶೀರ್ವಾದ ಪಡೆದ ಕುಮಾರಸ್ವಾಮಿ
author img

By

Published : May 13, 2022, 3:26 PM IST

Updated : May 13, 2022, 3:51 PM IST

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಜೆಡಿಎಸ್‌ನ ಮಹತ್ವಾಕಾಂಕ್ಷಿ ಜನತಾ ಜಲಧಾರೆ ಸಮಾರೋಪ ಸಮಾರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ತಂದೆ-ತಾಯಿಯ ಆಶೀರ್ವಾದ ಪಡೆದಿದ್ದಾರೆ. ಪದ್ಮನಾಭನಗರಕ್ಕೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ, ತಂದೆ ಹೆಚ್.ಡಿ.ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ರಾಮನಗರದಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಲಧಾರೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯುತ್ತಿದೆ. ಜೆಡಿಎಸ್​ ಪಕ್ಷವನ್ನು ಬೆಂಬಲಿಸುವ ಚರ್ಚೆ ಪ್ರಾರಂಭವಾಗಿದೆ. ಜಲಧಾರೆ ಉತ್ತಮವಾದ ಕಾರ್ಯಕ್ರಮ, ಕುಮಾರಸ್ವಾಮಿ ಅವರನ್ನು ಆಶೀರ್ವದಿಸೋಣ ಎಂದು ಚರ್ಚೆ ನಡೆಯುತ್ತಿದೆ ಎಂದರು.

ತಂದೆ-ತಾಯಿ ಆಶೀರ್ವಾದ ಪಡೆದ ಕುಮಾರಸ್ವಾಮಿ

ಕನ್ನಡಿಗರಿಗೆ ರಕ್ಷಣೆ ನೀಡುವ ಸರ್ಕಾರ : ಜೆಡಿಎಸ್​ ಪಕ್ಷ ಮುಳುಗ್ಹೋಯ್ತು, ಪಕ್ಷ ಚೇತರಿಸಿಕೊಳ್ಳಲ್ಲ ಎಂದು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತಾ ಜಲಧಾರೆ ಉತ್ತರ ಕೊಟ್ಟಿದೆ. ಜಲಧಾರೆಯಿಂದ ನನ್ನ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಬಂದಿದೆ. ಡಬಲ್ ಎನರ್ಜಿಯಿಂದ ಕಾರ್ಯಕರ್ತರು ಹೊರಟಿದ್ದಾರೆ.

ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ‌, ಪ್ರಾದೇಶಿಕ ಪಕ್ಷ, ಕನ್ನಡಿಗರಿಗೆ ರಕ್ಷಣೆ ನೀಡುವ ಸರ್ಕಾರ ತರುವುದಕ್ಕೆ ರಾಜ್ಯದ ಜನ ಮನಸ್ಸು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್​ ಪಕ್ಷದಲ್ಲಿನ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​​ಡಿಕೆ, ಜನತಾ ಜಲಧಾರೆ ಸಭೆ ಬಳಿಕ ಎಲ್ಲವೂ ಸರಿಯಾಗಲಿದೆ. ಎಲ್ಲ ಪಕ್ಷಗಳಲ್ಲೂ ಸಹ ಸಮಸ್ಯೆಗಳು ಇದೆ. ಈಗ ಕಾಂಗ್ರೆಸ್‌ನಲ್ಲಿ ಹೊತ್ತಿ ಉರಿಯುತ್ತಿಲ್ಲವೇ?. ಅಷ್ಟೊಂದು ದೊಡ್ಡ ಮಟ್ಟದ ಸಮಸ್ಯೆ ನಮ್ಮಲ್ಲಿ ಇಲ್ಲ ಎಂದರು.

ಜಲಧಾರೆ ಆರಂಭದ ದಿನದಿಂದ ಮಳೆ : ಇವತ್ತು ಕನಿಷ್ಠ 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತದೆ. ಜಲಧಾರೆ ಆರಂಭವಾದ ದಿನದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಿರಂತರವಾಗಿ ಉತ್ತಮ ಮಳೆ ಬರುತ್ತಿರುವುದು ಶುಭ ಸೂಚಕ. ಇದು ನಮ್ಮ ಕಾರ್ಯಕರ್ತರಿಗೂ ಹುಮ್ಮಸ್ಸು ನೀಡಿದೆ ಎಂದರು.

ಸಾಲಮನ್ನಾ ಮಾಡಿ ಸಾಬೀತು : 123ರ ಗುರಿ ಹೇಳಿದಾಗ ಬಹಳ ಜನ ಕೇವಲವಾಗಿ ಮಾತನಾಡಿದ್ದಾರೆ. ರೈತರ ಸಾಲಮನ್ನಾ ಮಾಡುತ್ತೇನೆ ಎಂದಾಗಲೂ ಮಾತನಾಡಿದ್ದರು. ರೈತರ ಸಾಲಮನ್ನಾ ಮಾಡಿ ಸಾಬೀತು ಮಾಡಿದ್ದೇನೆ. ಈ ಬಾರಿ 123ರ ಗುರಿ ಜೊತೆಗೆ ರಾಜ್ಯದ ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಕನ್ನಡತನ ಇರುವ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇಂತಹ ಸರ್ಕಾರ ಪ್ರತಿಷ್ಠಾಪನೆಯಾಗಲು ನಾಡಿನ ಜನತೆ ಆಶೀರ್ವಾದ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಪಿಎಸ್ಐ ಅಕ್ರಮದ ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ: ಪ್ರಿಯಾಂಕ್​​ ಖರ್ಗೆ

Last Updated : May 13, 2022, 3:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.