ETV Bharat / state

ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಜಯಭೇರಿ.. ಜಾರಕಿಹೊಳಿಗೆ ಮುಖಭಂಗ

author img

By

Published : May 13, 2023, 12:37 PM IST

ಅಥಣಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮಣ ಸವದಿ ಸುಮಾರು 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

lakshmana-savadi-wins-against-mahesh-kumatalli
ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಜಯಭೇರಿ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಚರ್ಚಿತ ಮತ್ತು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರಗಳಲ್ಲಿ ಒಂದಾದ ಬೆಳಗಾವಿಯ ಅಥಣಿಯಲ್ಲಿ. ಬಿಜೆಪಿಯ ಕಟ್ಟಾಳು ಲಕ್ಷ್ಮಣ ಸವದಿ ಅವರು ಸುಮಾರು 30 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ. ಟಿಕೆಟ್​ ವಂಚಿತರಾದ ಬಳಿಕ ಪಕ್ಷಕ್ಕೆ ಗುಡ್​ಬೈ ಹೇಳಿ ಸವದಿ ಕಾಂಗ್ರೆಸ್​ ಸೇರಿದ್ದರು. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿತ್ತು.

ಲಕ್ಷ್ಮಣ ಸವದಿ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷ ಉಪಮುಖ್ಯಮಂತ್ರಿ ಮಾಡಿ ಅಧಿಕಾರ ನೀಡಿತ್ತು. ಇಷ್ಟೆಲ್ಲದರ ಮಧ್ಯೆ ಟಿಕೆಟ್​ ನೀಡಿಲ್ಲ ಎಂಬ ಕಾರಣಕ್ಕಾಗಿ ಮುನಿಸಿಕೊಂಡ ಇಬ್ಬರೂ ಕಾಂಗ್ರೆಸ್​ ಪಾಳಯ ಸೇರಿ ಮಾತೃ ಪಕ್ಷಕ್ಕೆ ಸೆಡ್ಡು ಹೊಡೆದಿದ್ದರು.

ಟಿಕೆಟ್​ ನಿರಾಕರಿಸಿದ್ದಕ್ಕೆ ಬಂಡೆದ್ದು ಕಾಂಗ್ರೆಸ್​ ಸೇರಿ ಬಿಜೆಪಿಗೆ ಸೆಡ್ಡು ಹೊಡೆದಿರುವ ಲಿಂಗಾಯತ ಸಮುದಾಯ ಇನ್ನೊಬ್ಬ ನಾಯಕ ಲಕ್ಷ್ಮಣ ಸವದಿ. ಬಿಜೆಪಿಯಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದ ಸವದಿ ಈ ಬಾರಿ ಬಿಜೆಪಿ ವಿರುದ್ಧವೇ ಕಣದಲ್ಲಿದ್ದರು. ಮಹೇಶ್​ ಕುಮಟಳ್ಳಿ ವಿರುದ್ಧ ಅಥಣಿ ಕ್ಷೇತ್ರದಲ್ಲಿ ಸ್ಪರ್ಧೆ ಒಡ್ಡಿದ್ದರು. ಮಾಜಿ ಡಿಸಿಎಂ ಆಗಿದ್ದ ಸವದಿ 2004, 2008, 2013 ರ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದರು.

2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಕೇವಲ 2741 ಮತಗಳ ಅಂತರದಿಂದ ಸೋತಿದ್ದರು. ಇದರ ಬಳಿಕ ವಿಧಾನಪರಿಷತ್​ಗೆ ಆಯ್ಕೆಯಾಗಿ, ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅಥಣಿಯಿಂದ ವಿಧಾನಸಭೆಗೆ ಸ್ಪರ್ಧಿಸಲು ಬಯಸಿದ್ದ ಸವದಿಗೆ ಬಿಜೆಪಿ ಟಿಕೆಟ್​ ನೀಡಿರಲಿಲ್ಲ. ಈಗ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ:92 ಹರೆಯದಲ್ಲೂ ರಾಜಕೀಯ ರಣೋತ್ಸಾಹ!.. ಶಾಮನೂರು ಶಿವಶಂಕರಪ್ಪಗೆ ಭರ್ಜರಿ ಗೆಲುವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.