ETV Bharat / state

ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕ ತೀರ್ಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

author img

By

Published : Jun 23, 2023, 7:24 PM IST

Etv Bharatlakshmi-hebbalkar-reaction-on-date-of-acceptance-of-application-for-gruha-lahakshmi-sceme
ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕದ ತೀರ್ಮಾನ: ಲಕ್ಷ್ಮಿ ಹೆಬ್ಬಾಳ್ಕರ್

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನಿಗದಿಪಡಿಸಿಲ್ಲ. ಹೀಗಾಗಿ ಮುಗಿಬೀಳಲು ಹೋಗಬೇಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಡಿಸಿಎಂ ಡಿ.ಕೆ. ಶಿವಕುಮಾರ್​ ನೇತೃತ್ವದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯ ಕುರಿತ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ಆಗಿದೆ. ಒಂದು ಆ್ಯಪ್ ತಯಾರಾಗಿದೆ. ಮುಂದಿನ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡುತ್ತೇವೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದರು.

ಸಿಎಂ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡುತ್ತೇವೆ. ಮುಂದಿನ ವಾರ ಕ್ಯಾಬಿನೆಟ್ ಮೀಟಿಂಗ್ ಇದೆ. ಆಗಸ್ಟ್ ತಿಂಗಳಲ್ಲಿ ಯೋಜನೆ ಜಾರಿಗೆ ಬರಲಿದೆ. ಸೇವಾಸಿಂಧು ಸರ್ವರ್ ಓವರ್ ಲೋಡ್ ಆಗುತ್ತಿದೆ. ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲ ಆ್ಯಪ್​ನಲ್ಲಿ ಪರಿಹಾರ ಸಿಗಲಿದೆ. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ ಎಂದು ಹೇಳಿದರು.

ಕಂದಾಯ ಸಚಿವರು ನಾಡಕಚೇರಿ, ತಹಶೀಲ್ದಾರರ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರ ಇಲಾಖೆಯಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಗೃಹ ಜ್ಯೋತಿ ಯೋಜನೆಯದ್ದು ಒಂದೇ ಸಾರಿ ಓವರ್ ಲೋಡ್ ಆಗ್ತಾ ಇತ್ತು. ಲಕ್ಷಾಂತರ ಜನ ಅರ್ಜಿ ಹಾಕಿದ್ದರಿಂದ ಓವರ್ ಲೋಡ್ ಆಗಿತ್ತು. ಇದೀಗ ಗೃಹ ಜ್ಯೋತಿ ಸ್ಟೇಬಲ್ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇಂದು ಒಂದೇ ದಿನ ಗೃಹ ಜ್ಯೋತಿಗೆ ಆರು ಲಕ್ಷ ಮಂದಿ ಅರ್ಜಿ ಹಾಕಿದ್ದಾರೆ. ಅದೇ ರೀತಿ ಗೃಹಲಕ್ಷ್ಮಿ ಕೂಡ ಸ್ಟೇಬಲ್ ಆಗಿರುವಂತೆ ನೋಡಿಕೊಳ್ಳುತ್ತೇವೆ. ಗೃಹಲಕ್ಷ್ಮಿ ಗಾಗಿ ಪ್ರಜಾಪ್ರತಿನಿಧಿ ಆಯ್ಕೆ ಮಾಡ್ತೇವೆ. ಕ್ಯಾಬಿನೇಟ್​ನಲ್ಲೂ ಪ್ರಜಾಪ್ರತಿನಿಧಿ ಆಯ್ಕೆ ಅಂತಿಮ ನಿರ್ಧಾರ ಆಗುತ್ತದೆ. ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿ ಆಯ್ಕೆ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಟೈಂ ಬೌಂಡ್ ಇದಕ್ಕೆ ಇಲ್ಲ, ಹೀಗಾಗಿ ರಶ್ ಮಾಡಿಕೊಳ್ಳಲು ಹೋಗಬೇಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಲಂಚ ಪಡೆದರೆ ಪರವಾನಗಿ ರದ್ದು: ಡಿ.ಕೆ.ಶಿವಕುಮಾರ್​ ಎಚ್ಚರಿಕೆ

ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ- ಡಿಸಿಎಂ: ಮತ್ತೊಂದೆಡೆ, ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ ಎಂದು ತಿಳಿಸಿದರು. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್​ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.