ಎಸಿಬಿ ರದ್ಧತಿ ಬಗ್ಗೆ ಅಧ್ಯಯನ ವರದಿ ನೀಡಲು ಕಾನೂನು ಇಲಾಖೆಗೆ ಸೂಚನೆ: ಸಿಎಂ

author img

By

Published : Aug 12, 2022, 3:29 PM IST

law-department-will-submit-study-report-on-acb-repeal-order-says-cm-bommai

ಎಸಿಬಿ ರದ್ದು ಮಾಡುವ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಈ ವಿಚಾರ ನ್ಯಾಯಾಲಯದಲ್ಲಿ ಇದ್ದುದರಿಂದ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಎಸಿಬಿ ರದ್ಧತಿ ಬಗ್ಗೆ ಹೈಕೋರ್ಟ್​ ನೀಡಿರುವ ತೀರ್ಪನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಅಡ್ವೋಕೇಟ್ ಜನರಲ್ ಅವರಿಗೆ ಹೇಳಿದ್ದೇವೆ. ಇವರು ಕೊಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಸದೀಯ ವ್ಯವಹಾರಗಳ ಸಂಸ್ಥೆ ಮತ್ತು ಭಾಷಾಂತರ ಇಲಾಖೆಯ ಕನ್ನಡ ಕಾನೂನು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಎಸಿಬಿ ರದ್ದು ಮಾಡುವ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿದ್ದು, ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗೆ ಬದ್ಧವಾಗಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಎಸಿಬಿ ರದ್ದು ಆದೇಶದ ಬಗ್ಗೆ ಅಧ್ಯಯನ ವರದಿ ನೀಡಲು ಕಾನೂನು ಇಲಾಖೆಗೆ ಸೂಚನೆ: ಸಿಎಂ ಬೊಮ್ಮಾಯಿ

ಎಸಿಬಿ ರದ್ದು ಮಾಡುವ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಈ ವಿಚಾರ ನ್ಯಾಯಾಲಯದಲ್ಲಿ ಇದ್ದುದರಿಂದ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಈಗ ನ್ಯಾಯಾಲಯವೇ ಎಸಿಬಿಯನ್ನು ರದ್ದುಗೊಳಿಸಿದೆ. ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿಯೂ ಸಿಎಂ ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಭಾರತ ದಂಡ ಸಂಹಿತೆ, ದಂಡ ಪ್ರಕಿಯೆ ಸಂಹಿತೆ ಮತ್ತು ಸಾಕ್ಷ್ಯ ಅಧಿನಿಯಮಗಳ ದ್ವಿಭಾಷಾ ಕನ್ನಡ ಆವೃತ್ತಿಗಳ ಲೋಕಾರ್ಪಣೆ ಕುರಿತ ಮಾತನಾಡಿದ ಅವರು, ಕಾನೂನಿನ ಜ್ಞಾನ ಮತ್ತು ಅರಿವು ಬಹಳ ಮುಖ್ಯವಾಗಿದೆ. ಹಲವಾರು ಕಾನೂನುಗಳು ಮಾಹಿತಿ ಇಂಗ್ಲಿಷ್​ನಲ್ಲಿವೆ. ಆದರೆ, ಕಳೆದ 15 ವರ್ಷದಿಂದ ಕನ್ನಡಕ್ಕೆ ತರ್ಜುಮೆ ಮಾಡುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕಾನೂನು ಇಲಾಖೆ ಕನ್ನಡದಲ್ಲಿ ತರ್ಜುಮೆ ಮಾಡಿದೆ. ಜನ ಸಮಾನ್ಯರಿಗೆ ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ತಿಳಿದುಕೊಳ್ಳಲು ಪ್ರಯೋಜನ ಆಗುತ್ತಿದೆ ಎಂದು ಹೇಳಿದರು.

ಪ್ರತಿ ತಾಲ್ಲೂಕು ಕಚೇರಿ, ಪೊಲೀಸ್ ಠಾಣೆಗಳಲ್ಲೂ ಈ ಪುಸ್ತಕಗಳನ್ನು ಒದಗಿಸಬೇಕು. ವೆಬ್​ಸೈಟ್​ನಲ್ಲೂ ಲಭ್ಯವಾಗುವಂತೆ ಮಾಡುವುದರಿಂದ ಸಾರ್ವಜನಿಕರು ಪುಸ್ತಕಗಳ ಬಗ್ಗೆ ತಿಳಿದುಕೊಳ್ಳಬಹುದು. ಮುಂದಿನ ದಿನಗಳಲ್ಲಿ ಎಲ್ಲ ಕಾನೂನುಗಳು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಇಂಧನ ಸಚಿವ ಸುನೀಲ್ ಕುಮಾರ್, ಕ್ರೀಡಾ ಸಚಿವ ನಾರಾಯಣ ಗೌಡ ಹಾಜರಿದ್ದರು.

ಇದನ್ನೂ ಓದಿ: ಯುವತಿಯರು ಉದ್ಯೋಗ ಬೇಕಾದ್ರೆ ಮಂಚ ಹತ್ತಬೇಕು: ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.