ETV Bharat / state

ಯಾವುದೇ ಪಕ್ಷದವರಾಗಿರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

author img

By

Published : May 30, 2022, 7:40 PM IST

Home Minister Aaruga Jnanendra's response in Bangalore
ಗೃಹ ಸಚಿವ ಆರಗ ಜ್ಞಾನೇಂದ್ರ

ಪತ್ರಕರ್ತರ ಸೋಗಿನಲ್ಲಿ ಬಂದು ರಾಕೇಶ್​ ಟಿಕಾಯಿತ್​ ಮೇಲೆ ಮಸಿ ಹಾಕಿದ್ದಾರೆ. ಅವರು ಯಾವುದೇ ಪಕ್ಷದವರಾದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯಿತ್ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅವರ ಮೇಲೆ ಪತ್ರಕರ್ತರ ಸೋಗಿನಲ್ಲಿ ಬಂದು ಮಸಿ ಹಾಕಿದ್ದಾರೆ. ಅವರು ಯಾವುದೇ ಪಕ್ಷದವರಾದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ

ಇದು ಅಮಾನವೀಯ ಪ್ರಕರಣ. ನಮ್ಮಲ್ಲಿ ಇಂತಹ ಘಟನೆ ಎಂದೂ ನಡೆದಿರಲಿಲ್ಲ. ಅವರು ಯಾವ ಪಕ್ಷದವರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಮಾಡಲು ಯಾವ ಪಕ್ಷ ಹೇಳಿಕೊಡುತ್ತದೆ ಹೇಳಿ ಎಂದು ಪ್ರಶ್ನಿಸಿದರು. ಪಠ್ಯ ವಿಚಾರ ಮರೆ ಮಾಚಲು ಈ ಪ್ರಕರಣ ಮಾಡಿಸಲಾಗಿದೆ ಎಂದು ಡಿ.ಕೆ‌.ಶಿವಕುಮಾರ್ ಆರೋಪ ಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಬರುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ. ಹಾಗಾಗಿ ಕಾಂಗ್ರೆಸ್​ ಈ ರೀತಿ ಆರೋಪ ‌ಮಾಡುತ್ತಿದೆ. ಶಿವಕುಮಾರ್ ಮಾತಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ರಾಕೇಶ್ ಟಿಕಾಯಿತ್ ಮೇಲೆ ಮಸಿ ಬಳಿದ ಪ್ರಕರಣ : ಪತ್ರಿಕಾಗೋಷ್ಠಿ ಮೊಟಕುಗೊಳಿಸಲು ಮೂವರಿಂದ ಹಲ್ಲೆ.. ಡಿಸಿಪಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.