ETV Bharat / state

ಕೆಪಿಎಸ್​ಸಿ ನೇಮಕಾತಿ; ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Nov 21, 2023, 12:14 PM IST

KPSC recruitment: ಎರಡು ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದೆ.

Legal Adviser Job Notification From KPSC
Legal Adviser Job Notification From KPSC

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಖಾಲಿ ಇರುವ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕಾನೂನು ಸಲಹೆಗಾರರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡು ವರ್ಷಗಳ ಅವಧಿಗೆ ಈ ನೇಮಕಾತಿ ನಡೆಯಲಿದೆ. ಕಾನೂನು ಪದವೀಧರ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಕೆಪಿಎಸ್​ಸಿಯಲ್ಲಿನ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ಕಾನೂನು ಸಲಹೆಗಾರರ ಹುದ್ದೆ

ಅರ್ಹತೆ: ಈ ಹುದ್ದೆಗೆ ಹೆಚ್ಚಿನ ಅನುಭವ ಇರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಧೀಶರನ್ನು ನೇಮಕ ಮಾಡಲಾಗವುದು.

ಈ ಹುದ್ದೆಯನ್ನು ಎರಡು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುವುದು. ಮೊದಲ ಒಂದು ವರ್ಷದ ಕಾರ್ಯದಕ್ಷತೆ ಆಧಾರದ ಮೇಲೆ ಮುಂದಿನ ಒಂದು ವರ್ಷದ ಸೇವಾ ಅವಧಿ ವಿಸ್ತರಣೆ ಆಗಲಿದೆ.

ವೇತನ: ಈ ಹುದ್ದೆಗೆ ಮಾಸಿಕ 1,15,000 ವೇತನ ಮತ್ತು ವಾಹನ ಭತ್ಯೆ 35,000 ರೂ. ನಿಗದಿಸಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 65 ವರ್ಷ ಆಗಿದೆ.

ಹುದ್ದೆ ಆಯ್ಕೆ: ಈ ಹುದ್ದೆಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಹುದ್ದೆಯ ಅಕಾಂಕ್ಷಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ಸೇವಾ ವಿವರಗಳನ್ನೊಳಗೊಂಡ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ವಿಳಾಸ: ಕಾರ್ಯದರ್ಶಿ, ಕರ್ನಾಟಕ ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು- 560001.

ಈ ಹುದ್ದೆಗೆ ಡಿಸೆಂಬರ್​ 15ರಿಂದ ಅರ್ಜಿ ಸಲ್ಲಿಕೆಗೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 30 ಆಗಿದೆ.

ಈ ಹುದ್ದೆಗೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಬಿಎಂಆರ್​ಸಿಎಲ್‌ನಲ್ಲಿದೆ ಉದ್ಯೋಗ: 10 ಮ್ಯಾನೇಜರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.