ETV Bharat / state

ನಾಳೆಯಿಂದ ವಿಧಾನಮಂಡಲ ಅಧಿವೇಶನ.. ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಭಾಪತಿ ಮಲ್ಕಾಪುರೆ ಸೂಚನೆ

author img

By

Published : Dec 18, 2022, 5:53 PM IST

20 ಕ್ಕಿಂತ ಅಧಿಕ ಪೊಲೀಸ್ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಪ್ರತಿಭಟನಾ ಸ್ಥಳ ಗುರುತಿಸಿ ಕುಡಿಯುವ ನೀರು ಮತ್ತಿತರ ಮೂಲಸೌಕರ್ಯ ಒದಗಿಸಲಾಗಿದೆ. ವಿವಿಧ ಸಂಘ,ಸಂಸ್ಥೆಗಳು ಪ್ರತಿಭಟನೆ ನಡೆಸಲು ಅನುಮತಿ ಕೇಳಿದ್ದು, ಸಂಬಂಧಿಸಿದ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಅವರ ಗಮನಕ್ಕೆ ತರಲಾಗಿದೆ ಎಂದು ಡಿಸಿ ನಿತೇಶ್ ಪಾಟೀಲ ಮಾಹಿತಿ.

Chairman Raghunathrao Malkapure held meeting to officials
ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅಧಿಕಾರಿಗಳ ಸಭೆ ನಡೆಸಿದರು.

ಬೆಂಗಳೂರು/ಬೆಳಗಾವಿ: ನಾಳೆಯಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದ್ದು, ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್​ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಸೂಚಿಸಿದರು.

ಸುವರ್ಣಸೌಧದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಚಿವರು, ಶಾಸಕರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಸಮರ್ಪಕ ವ್ಯವಸ್ಥೆಗೆ ಸೂಚನೆ : ವಸತಿ ಕೊರತೆ ಕಂಡುಬಂದರೆ ಕೂಡಲೇ ವ್ಯವಸ್ಥೆ ಮಾಡಬೇಕು. ವಾಹನ ಚಾಲಕರು, ಮಾರ್ಷಲ್ ಗಳಿಗೆ ಸಮರ್ಪಕ ಊಟ ಒದಗಿಸಬೇಕು. ಆರೋಗ್ಯ ಸೌಲಭ್ಯ ಮತ್ತು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಈಗಾಗಲೇ ಸೌಲಭ್ಯ ಒದಗಿಸಲಾಗಿದೆ. ವೈದ್ಯಕೀಯ ತಂಡ ಸದಾ ಲಭ್ಯವಿರುವಂತೆ ಇರಬೇಕು. ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಪರಿಷತ್ತಿನ ವತಿಯಿಂದ ಪ್ರತಿವರ್ಷದಂತೆ ಪಾಸ್ ನೀಡಲಾಗುತ್ತದೆ ಎಂದು ಮಲ್ಕಾಪುರೆ ಹೇಳಿದರು.

20ಕ್ಕಿಂತ ಅಧಿಕ ಪೊಲೀಸ್ ಚೆಕ್​​ಪೋಸ್ಟ್​: ಅಧಿವೇಶನದ ಹಿನ್ನೆಲೆಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿರುವ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದರು.

20 ಕ್ಕೂ ಅಧಿಕ ಪೊಲೀಸ್ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಪ್ರತಿಭಟನಾ ಸ್ಥಳಗಳನ್ನು ಗುರುತಿಸಿ ಕುಡಿಯುವ ನೀರು ಮತ್ತಿತರ ಮೂಲಸೌಕರ್ಯವನ್ನು ಒದಗಿಸಲಾಗಿದೆ. ವಿವಿಧ ಸಂಘ,ಸಮುದಾ ಪ್ರತಿಭಟನೆ ನಡೆಸಲು ಅನುಮತಿ ಕೇಳಿದ್ದು, ಸಂಬಂಧಿಸಿದ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಪಾಸ್ ವ್ಯವಸ್ಥೆ: ಕಲಾಪಗಳ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಸುವರ್ಣಸೌಧ ಪ್ರವೇಶಕ್ಕೆ ಮಾತ್ರ ಜಿಲ್ಲಾಡಳಿತದಿಂದ ಪಾಸ್ ನೀಡಲಾಗುತ್ತಿದೆ. ಉಳಿದಂತೆ ವಿಧಾನಸಭೆ ಹಾಗೂ ಪರಿಷತ್ ವತಿಯಿಂದ ಪಾಸ್ ನೀಡಲಾಗುತ್ತದೆ ಎಂದರು.

ಸರ್ಕಾರಿ ವಾಹನ ಬಳಕೆ: ಈ ಬಾರಿ ಸರಕಾರಿ ವಾಹನಗಳನ್ನು ಮಾತ್ರ ಬಳಕೆ‌ ಮಾಡಲಾಗುತ್ತಿದೆ. ಸಚಿವರು ಹಾಗೂ ಉನ್ನತ ಅಧಿಕಾರಿಗಳು ತಮಗೆ ಮೀಸಲಾದ ವಾಹನಗಳನ್ನು ಬೆಂಗಳೂರಿನಿಂದ ತರುತ್ತಿದ್ದಾರೆ. ಆದ್ದರಿಂದ ಸಾರಿಗೆ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.

ಇದನ್ನೂಓದಿ:ಎಂಇಎಸ್ ಪುಂಡರನ್ನು ಹದ್ದುಬಸ್ತಿನಲ್ಲಿಡಲು ನಮಗೆ ಗೊತ್ತಿದೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.