ETV Bharat / state

ಒಬಿಸಿ ಮೀಸಲಾತಿಗೆ ಡಿಕೆ ಶಿವಕುಮಾರ್ ಬೆಂಬಲ ಕೋರಿದ ಪಂಚಮಸಾಲಿ ಸಮುದಾಯ

author img

By

Published : Dec 11, 2020, 3:46 AM IST

ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪ್ರವರ್ಗ 2ಎಗೆ ಸೇರಿಸಲು ತಾವು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಅಪ್ಪೂಗೌಡ ಪಾಟೀಲ ಹಾಗೂ ಸಮುದಾಯದ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

lingayat community leaders meet dk shivakumar
ಲಿಂಗಾಯತ ಸಮುದಾಯದ ಮುಖಂಡರ ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಸಂಜೆ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪ್ರವರ್ಗ 2ಎಗೆ ಸೇರಿಸಲು ತಾವು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಅಪ್ಪೂಗೌಡ ಪಾಟೀಲ ಹಾಗೂ ಸಮುದಾಯದ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಪಂಚಲಿಂಗ ದರ್ಶನಕ್ಕೆ ಚಾಲನೆ: ರಾಜ್ಯ ಕೊರೊನಾ ಮುಕ್ತವಾಗಲಿ ಎಂದು ಪ್ರಾರ್ಥಿಸಿದ ಸಚಿವ

ಈ ಭೇಟಿಯ ಸಂದರ್ಭದಲ್ಲಿ ಸುದೀರ್ಘ ಸಮಾಲೋಚನೆ ನಡೆಸಿರುವ ಡಿಕೆ ಶಿವಕುಮಾರ್, ಪಂಚಮಸಾಲಿ ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಇದ್ದಾಗ ಸಾಕಷ್ಟು ಕಾರ್ಯಕ್ರಮವನ್ನು ರೂಪಿಸಿತ್ತು. ಆದರೆ ಈಗಿನ ಸರ್ಕಾರ ಅದನ್ನು ಮುಂದುವರಿಸಿಕೊಂಡು ಹೋಗುತ್ತಿಲ್ಲ. ಬದಲಾಗಿ ಅನುದಾನ ಕಡಿತ ಹಾಗೂ ಯೋಜನೆಯನ್ನು ಕೈಬಿಡುವ ಕಾರ್ಯ ಮಾಡಿದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕಾಗ ಸರ್ಕಾರದ ಜೊತೆ ಈ ವಿಚಾರವಾಗಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.