ETV Bharat / state

ಅಕ್ರಮ ಆಸ್ತಿ ಗಳಿಕೆ ಸಾಬೀತು: ಎಸ್​ಪಿಗೆ 1 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್​

author img

By

Published : Jul 1, 2022, 9:03 PM IST

ಎಸ್​ಪಿಯಾಗಿ ಶ್ರೀನಿವಾಸ್ 2007ರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

lokayukta-court-1-crore-rupees-fine-to-sp
ಎಸ್​ಪಿಗೆ 1 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್​

ಬೆಂಗಳೂರು: ಎಸ್​ಪಿಯಾಗಿ ಕಾರ್ಯನಿರ್ವಹಿಸುವಾಗ ಅಕ್ರಮ ಆಸ್ತಿ ಗಳಿಕೆ ಸಾಬೀತು ಹಿನ್ನೆಲೆಯಲ್ಲಿ ಶ್ರೀನಿವಾಸ್ ಐಯ್ಯರ್​ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಕೋಟಿ ರೂಪಾಯಿ ದಂಡ ವಿಧಿಸಿ 77ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯ ಎಸ್​ಪಿಯಾಗಿ ಶ್ರೀನಿವಾಸ್ 2007ರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ತಮ್ಮ ಆದಾಯ ಮೂಲಗಳಿಗಿಂತ ಶೇ.53ರಷ್ಟು ಆಸ್ತಿ ಸಂಪಾದನೆ ಮಾಡಿರುವುದು ದಾಳಿ ವೇಳೆ ಕಂಡುಬಂದಿತ್ತು.

ಈ ಸಂಬಂಧ ಅಂದಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರಕರಣ ದಾಖಸಿಕೊಂಡು ತನಿಖೆ ನಡೆಸಿದ ಪೊಲೀಸರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಎಸ್.ವಿ.ಶ್ರೀಕಾಂತ್ ಆರೋಪಿ ಎಸ್​ಪಿಗೆ ನಾಲ್ಕು ವರ್ಷ ಸಾದಾ ಸಜೆ ಹಾಗೂ ಒಂದು ಕೋಟಿ ರೂ.ದಂಡ ವಿಧಿಸಿದ್ದಾರೆ. ದಂಡ ಪಾವತಿಸುವಲ್ಲಿ ವಿಫಲರಾದರೆ ಹೆಚ್ಚುವರಿಯಾಗಿ 2 ವರ್ಷ ಸಾದಾ ಸಜೆ ಅನುಭವಿಸಬೇಕೆಂದು ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: ಚರ್ಚೆ ಹುಟ್ಟು ಹಾಕಿದ ಕರ್ನಾಟಕ ಶಾಸಕರ ಲೇಹ್-ಲಡಾಖ್​ ಪ್ರವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.