ETV Bharat / state

ಕೌಶಲ ಕಲಿಕೆಗೆ ಒತ್ತು ಸೇರಿ ಎನ್ಇಪಿ ಆಶಯಗಳ ಅನುಷ್ಠಾನ.. ಸಚಿವ ಡಾ. ಸಿ ಎನ್ ಅಶ್ವತ್ಥ್​​ ನಾರಾಯಣ..

author img

By

Published : Sep 28, 2021, 9:27 PM IST

minister-ashwath-narayan-talk-about-nep
ಸಚಿವ ಡಾ. ಸಿ ಎನ್ ಅಶ್ವತ್ಥ್​​ ನಾರಾಯಣ..

ಸ್ಮಾರ್ಟ್ ಕ್ಲ್ಯಾಸ್ ರೂಮ್​ಗಳಿಗೆ ಗೆಸ್ಚರ್ ಕಂಪ್ಯೂಟಿಂಗ್, ಬಯೋಮೆಟ್ರಿಕ್ಸ್ ತಂತ್ರಜ್ಞಾನ ಅಳವಡಿಕೆ, ತರಬೇತಿಗಾಗಿ ವರ್ಚುವಲ್​ ರಿಯಾಲಿಟಿ, ಆಗ್ಮೆಂಟೆಡ್ ರಿಯಾಲಿಟಿ ತಾಂತ್ರಿಕತೆ ಬಳಕೆ, ಕಲಿಕಾ ದತ್ತಾಂಶ ಸಾಧನೆಯ ಫಲಿತಾಂಶದ ಸಂಯೋಜನೆ, ಆರೋಗ್ಯಕರ ಸ್ಪರ್ಧಾ ಮನೋಭಾವ ಮೂಡಿಸಲು ಗೇಮಿಫಿಕೇಷನ್ ಮತ್ತು ಡಿಸೈನ್​ ತತ್ವಗಳ ಬಳಕೆ, ಪಠ್ಯ ಸಾಮಗ್ರಿ ರೂಪಿಸಲು ಆಟೋಮೇಷನ್ ಹಾಗೂ ರೋಬೋಟಿಕ್ ಉಪಕರಣಗಳ ಬಳಕೆ ಇವು ಇದರ ಭಾಗವಾಗಿರುತ್ತವೆ..

ಬೆಂಗಳೂರು : ವಿದ್ಯಾರ್ಥಿಗಳ ಕೌಶಲ್ಯಕ್ಕೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೋಸಿಸ್​ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ.

ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವತ್ಥ್​ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ನಡೆದ ಇನ್ಫೋಸಿಸ್ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಅವರು, ಕಾಲೇಜು‌ ವಿದ್ಯಾರ್ಥಿಗಳಿಗೆ ಕೌಶಲ‌ ಕಲಿಸುವ ಮೂರು ಸಾವಿರಕ್ಕೂ ಹೆಚ್ಚು ಕೋರ್ಸ್ ಗಳಿವೆ.

ಇವುಗಳಲ್ಲಿ ‘ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್’ ಬಳಕೆ, ಕಾಲೇಜು ಉಪನ್ಯಾಸಕರಿಗೆ‌ ಡಿಜಿಟಲ್ ತರಬೇತಿ, ಉದ್ಯೋಗ ಸಂಬಂಧಿ ಮಾರ್ಗದರ್ಶನಕ್ಕಾಗಿ ‘ಕ್ಯಾಂಪಸ್ ಕನೆಕ್ಟ್’ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಿಗೆ ಇನ್ಫೋಸಿಸ್ ವತಿಯಿಂದ 15,000 ಡಿಬಾಂಡೆಡ್ ಕಂಪ್ಯೂಟರ್​​ಗಳ ಕೊಡುಗೆ ಇವು ಒಡಂಬಡಿಕೆಗಳಾಗಿರುತ್ತವೆ ಎಂದು ಸಚಿವರು ತಿಳಿಸಿದರು.

‘ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್’ ಎಂಬುದು ಸಮಗ್ರ ಡಿಜಿಟಲ್ ಸಾಕ್ಷರತಾ ವೇದಿಕೆಯಾಗಿದೆ. ಇದು ಪರಿಣಾಮಕಾರಿ ಡಿಜಿಟಲ್ ಕಲಿಕೆ, ತಾಂತ್ರಿಕತೆ ಆಧಾರಿತ ಜೀವನ ಕೌಶಲ ಕೋರ್ಸ್ ಗಳು, ಗೇಮಿಫಿಕೇಷನ್, ಪ್ರತ್ಯಕ್ಷ ತರಗತಿಗಳು, ಉದ್ಯಮ ಪ್ರಮಾಣ ಪತ್ರೀಕರಣ (ಇಂಡಸ್ಟ್ರಿ ಸರ್ಟಿಫಿಕೇಷನ್), ಮೇಕರ್ಸ್ ಲ್ಯಾಬ್, ವೃತ್ತಿ ಮಾರ್ಗದರ್ಶನ (ಉನ್ನತ ಶಿಕ್ಷಣ)ವನ್ನು ಒಳಗೊಂಡಿರುತ್ತದೆ ಎಂದರು.

ಸ್ಮಾರ್ಟ್ ಕ್ಲ್ಯಾಸ್ ರೂಮ್​ಗಳಿಗೆ ಗೆಸ್ಚರ್ ಕಂಪ್ಯೂಟಿಂಗ್, ಬಯೋಮೆಟ್ರಿಕ್ಸ್ ತಂತ್ರಜ್ಞಾನ ಅಳವಡಿಕೆ, ತರಬೇತಿಗಾಗಿ ವರ್ಚುವಲ್​ ರಿಯಾಲಿಟಿ, ಆಗ್ಮೆಂಟೆಡ್ ರಿಯಾಲಿಟಿ ತಾಂತ್ರಿಕತೆ ಬಳಕೆ, ಕಲಿಕಾ ದತ್ತಾಂಶ ಸಾಧನೆಯ ಫಲಿತಾಂಶದ ಸಂಯೋಜನೆ, ಆರೋಗ್ಯಕರ ಸ್ಪರ್ಧಾ ಮನೋಭಾವ ಮೂಡಿಸಲು ಗೇಮಿಫಿಕೇಷನ್ ಮತ್ತು ಡಿಸೈನ್​ ತತ್ವಗಳ ಬಳಕೆ, ಪಠ್ಯ ಸಾಮಗ್ರಿ ರೂಪಿಸಲು ಆಟೋಮೇಷನ್ ಹಾಗೂ ರೋಬೋಟಿಕ್ ಉಪಕರಣಗಳ ಬಳಕೆ ಇವು ಇದರ ಭಾಗವಾಗಿರುತ್ತವೆ ಎಂದು ತಿಳಿಸಿದರು.

ಈ ಒಡಂಬಡಿಕೆಗಳ ಭಾಗವಾಗಿ ಸಂಸ್ಥೆಗಳ ನಡುವೆ ಉತ್ಕೃಷ್ಠ ಕ್ರಮಗಳ ವಿನಿಮಯಕ್ಕಾಗಿ ‘ಎನ್ಇಪಿ ಕಮ್ಯುನಿಟಿ’ಯನ್ನು ಸ್ಥಾಪಿಸಲಾಗುತ್ತದೆ. ಈ ಮೂಲಕ ಎನ್ಇಪಿ ರೂಪುರೇಷೆಗಳನ್ನು ಅನುಷ್ಠಾನಗೊಳಿಸಲು ಸಂಸ್ಥೆಗಳಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಪ್ರತಿಭಾವಂತರನ್ನು ಉತ್ತೇಜಿಸುವುದಕ್ಕಾಗಿ ಕೆಡಿಇಎಂ (ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್) ಹಾಗೂ ಇನ್ಫೋಸಿಸ್ ನಡುವೆ ಸಹಭಾಗಿತ್ವ ಏರ್ಪಡಲಿದೆ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲಕೃಷ್ಣ ಜೋಶಿ, ಇನ್ಫೋಸಿಸ್ ಕಂಪನಿಯ ಹಿರಿಯ ಉಪಾಧ್ಯಕ್ಷರಾದ ತಿರುಮಲ ಆರೋಹಿ, ಗುರುರಾಜ್ ದೇಶಪಾಂಡೆ, ಉಪಾಧ್ಯಕ್ಷ ಸತೀಶ್ ನಂಜಪ್ಪ, ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಸಂತೋಷ್ ಅನಂತಪುರ, ಇನ್ಫೋಸಿಸ್ ತರಬೇತಿ ಪ್ರಿನ್ಸಿಪಾಲ್ ಕಿರಣ್ ಎನ್ ಜಿ ಮತ್ತು ಸೀನಿಯರ್ ಲೀಡ್ ಪ್ರಿನ್ಸಿಪಲ್ ವಿಕ್ಟರ್ ಸುನರಾಜ್ ಅವರು ಉಪಸ್ಥಿತರಿದ್ದರು.

ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕಾನೂನು ಕೋಶ ಬಲಿಷ್ಠಗೊಳಿಸಲು ಸಿಎಂ ಸೂಚನೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.