ETV Bharat / state

ವಿಳಂಬವಾಗಿ ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸಿದ ಸಚಿವ ಕೋಟಾ ಶ್ರೀನಿವಾಸ್

author img

By

Published : Nov 22, 2020, 1:38 AM IST

ಇತ್ತೀಚೆಗೆ ಆರ್​​ಟಿಐ ಮಾಹಿತಿಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅ.17ರವರೆಗೆ ಸುಮಾರು 118 ಶಾಸಕರು ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ ಎಂಬ ಅಂಶ ಬೆಳಕಿಗೆ ಬಂದಿತ್ತು.

minister-kota-srinivas-poojari-submitted-property-details-to-lokayukta
ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಮೀನುಗಾರಿಕೆ ಹಾಗೂ ಮುಜರಾಯಿ‌ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಳಂಬವಾಗಿ ಲೋಕಾಯುಕ್ತರಿಗೆ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿದ್ದಾರೆ.

ಈ ಸಂಬಂಧ ಅ. 27ರಂದು 2019-20ನೇ ಸಾಲಿಗೆ ಸಂಬಂಧಪಟ್ಟಂತೆ ಆಸ್ತಿ ಮತ್ತು ಉತ್ತರದಾಯಿತ್ವ ವಿವರಗಳನ್ನೊಳಗೊಂಡ ಮಾಹಿತಿಯನ್ನು ಲೋಕಾಯುಕ್ತರಿಗೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಆರ್​​ಟಿಐ ಮಾಹಿತಿಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅ.17ರವರೆಗೆ ಸುಮಾರು 118 ಶಾಸಕರು ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ ಎಂಬ ಅಂಶ ಬೆಳಕಿಗೆ ಬಂದಿತ್ತು.

Minister Kota Srinivas poojari submitted property details to Lokayukta
ಪತ್ರ

ಲೋಕಾಯುಕ್ತ ಕಾಯ್ದೆ ಅನ್ವಯ ಪ್ರತಿ ವರ್ಷ ಜೂನ್‌ ಅಂತ್ಯದೊಳಗೆ ಲೋಕಾಯುಕ್ತರ ಮುಂದೆ ವಿಧಾನಸಭೆ ಮತ್ತು ವಿಧಾನಪರಿಷತ್‌ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಮಾಡಬೇಕು. ಜೂನ್‌ ಅಂತ್ಯದೊಳಗೆ ಆಸ್ತಿ ವಿವರ ಸಲ್ಲಿಕೆ ಮಾಡದಿದ್ದರೆ ಹೆಚ್ಚುವರಿಯಾಗಿ ಎರಡು ತಿಂಗಳ ಕಾಲ ಅಂದರೆ ಆಗಸ್ಟ್‌ ಅಂತ್ಯಗೊಳಗೆ ಸಲ್ಲಿಕೆ ಮಾಡಬೇಕು.

ಈ ಹಿನ್ನೆಲೆ ಇದೀಗ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತರಿಗೆ ಸಲ್ಲಿಕೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.