ETV Bharat / state

ಸೋಂಕಿತರ ತುರ್ತು ಚಿಕಿತ್ಸೆಗಾಗಿ ಮೊಬೈಲ್ ಆಕ್ಸಿಜನ್ ಬಸ್​.. ಬಿಎಂಟಿಸಿ ಹೊಸ ಪ್ರಯೋಗ

author img

By

Published : May 12, 2021, 9:17 PM IST

ಏಕಕಾಲಕ್ಕೆ ಒಟ್ಟು 6 ಮಂದಿಗೆ ಈ ಬಸ್​​ನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಚಾಲಕರು ಮತ್ತು ಸಿಬ್ಬಂದಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ 'ಆಕ್ಸಿಜನ್ ಆನ್ ವ್ಹೀಲ್ಸ್' ಬಸ್​​ ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್​​ಗಳನ್ನು ಇದರಲ್ಲಿ ಒದಗಿಸಲಾಗಿದೆ.

ಸೋಂಕಿತರ ತುರ್ತು ಚಿಕಿತ್ಸೆಗಾಗಿ ಮೊಬೈಲ್ ಆಕ್ಸಿಜನ್ ಬಸ್
ಸೋಂಕಿತರ ತುರ್ತು ಚಿಕಿತ್ಸೆಗಾಗಿ ಮೊಬೈಲ್ ಆಕ್ಸಿಜನ್ ಬಸ್

ಬೆಂಗಳೂರು: ಕೋವಿಡ್ ಪಿಡುಗು ಹೆಚ್ಚಾಗಿ ಸಾರ್ವಜನಿಕರು ಆಕ್ಸಿಜನ್​ಗಾಗಿ ಪರಿತಪಿಸುವುದನ್ನು ತಪ್ಪಿಸಲು ಖಾಸಗಿ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ ಮೊಬೈಲ್ ಆಕ್ಸಿಜನ್ ಘಟಕ ಪ್ರಾರಂಭಿಸಿದ್ದು, ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸಿದೆ.

ಪ್ರಸ್ತುತ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದ್ದು, ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ಬಸ್​​​​ನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸುತ್ತಿದ್ದು ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ.

ಸೋಂಕಿತರ ತುರ್ತು ಚಿಕಿತ್ಸೆಗಾಗಿ ಮೊಬೈಲ್ ಆಕ್ಸಿಜನ್ ಬಸ್

ಆಕ್ಸಿಜನ್ ಪೂರೈಸುವ ಈ ವಿಶೇಷ ಬಸ್​ ಅನ್ನು ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಲಾಗುತ್ತಿದ್ದು, ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಮೊಬೈಲ್ ಆಕ್ಸಿಜನ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ.

ಸದ್ಯಕ್ಕೆ ಪ್ರಾಯೋಗಿಕವಾಗಿ ಒಂದು ಬಿಎಂಟಿಸಿ ಬಸ್ ಅನ್ನು ಪ್ರಾರಂಭಿಸಲಾಗಿದ್ದು, ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆಯವರು ಈ ಬಸ್​​​ನಲ್ಲಿ ಆಕ್ಸಿಜನ್ ಸರಬರಾಜು ಮಾಡಿ ಸೇವೆ ನೀಡಲು ಎಲ್ಲ ಅಗತ್ಯ ಉಪಕರಣಗಳನ್ನು ಅಳವಡಿಸಿದ್ದಾರೆ.

ಏಕಕಾಲಕ್ಕೆ ಒಟ್ಟು 6 ಮಂದಿಗೆ ಈ ಬಸ್​​ನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಚಾಲಕರು ಮತ್ತು ಸಿಬ್ಬಂದಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ 'ಆಕ್ಸಿಜನ್ ಆನ್ ವ್ಹೀಲ್ಸ್' ಬಸ್​​ ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್​​ಗಳನ್ನು ಇದರಲ್ಲಿ ಒದಗಿಸಲಾಗಿದೆ. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2 ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.

ಈ ವಿಶೇಷ 'ಆಕ್ಸಿಜನ್ ಬಸ್ ಸೌಲಭ್ಯ' ಯಶಸ್ವಿಯಾದರೆ ಮುಂದೆ ಇನ್ನಷ್ಟು 'ಆಕ್ಸಿಜನ್ ಬಸ್ ಸೌಲಭ್ಯ' ನೀಡಲು ಸಾರಿಗೆ ನಿಗಮಗಳಿಂದ ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಸವದಿ ಕೂಡ ತಿಳಿಸಿದ್ದಾರೆ. ಈ ರೀತಿಯ ಮೊಬೈಲ್ ಆಕ್ಸಿಜನ್ ಬಸ್ ಪ್ರಯೋಗವು ಇಡೀ ದೇಶದಲ್ಲಿಯೇ ಒಂದು ವಿನೂತನ ಯತ್ನವಾಗಿದೆ.

ನಾಳೆಯಿಂದ ಪಾಲಿಕೆ ಅನುಮತಿ ಕೊಟ್ಟರೆ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಬಸ್ ನಿಲ್ಲಲಿದೆ. ಕೇವಲ ಆಸ್ಪತ್ರೆಯ ವೈದ್ಯರು ಬೆಡ್ ಕಾಲಿ ಇಲ್ಲವೆಂದೂ, ರೋಗಿಗೆ ಆಮ್ಲಜನಕದ ಅವಶ್ಯಕತೆ ಇದೆಯೆಂದು ಶಿಫಾರಸು ಮಾಡಿದರೆ ಮಾತ್ರ ಅಂತವರಿಗೆ ಆಮ್ಲಜನಕ ನೀಡಲಾಗುತ್ತದೆ.

ಇದನ್ನೂ ಓದಿ: ವ್ಯಾಕ್ಸಿನ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ, ಲಸಿಕೆಗಾಗಿ ಗುಂಪು ಸೇರಿಕೊಂಡು ನಿಲ್ಲಬೇಡಿ: ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.