ETV Bharat / state

ಬೆಂಗಳೂರು: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 2.43 ಕೆ.ಜಿ. ತೂಕದ ಮಾದಕ ವಸ್ತು ಜಪ್ತಿ

author img

By ETV Bharat Karnataka Team

Published : Oct 22, 2023, 1:17 PM IST

ದೊಡ್ಡನಾಗಮಂಗಲದ ವೀರಭದ್ರಸ್ವಾಮಿ ಲೇಔಟಿನಲ್ಲಿ ವ್ಯಕ್ತಿಯೊಬ್ಬ ಮಾದಕ ಪದಾರ್ಥಗಳನ್ನು ಸಂಗ್ರಹಿಸಿದ್ದು, ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು
ಬೆಂಗಳೂರು

ಬೆಂಗಳೂರು: ನಗರದ ಹೊರವಲಯದಲ್ಲಿರುವ ದೊಡ್ಡನಾಗಮಂಗಲದ ವೀರಭದ್ರಸ್ವಾಮಿ ಲೇಔಟಿನಲ್ಲಿ ಸಂಗ್ರಹಿಸಡಲಾಗಿದ್ದ ಭಾರಿ ಪ್ರಮಾಣದ ಮಾದಕ ಪದಾರ್ಥಗಳನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನೈಜೀರಿಯಾ ಮೂಲದ ವಿಕ್ಟರ್​​ ಒಬಿನ್ನಾ ಚುಕ್ವುಡಿ ಎಂಬಾತ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 2.43 ಕೆ.ಜಿ. ತೂಕದ ಎಂಡಿಎಂಎ, ಎರಡು ಮೊಬೈಲ್ ಫೋನ್‌ಗಳು ಹಾಗೂ ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ದೆಹಲಿಯಿಂದ ಮೆಸ್ಸೋ ಎಂಬಾತನಿಂದ ಮಾದಕ ಪದಾರ್ಥಗಳನ್ನು ಆಮದು ಮಾಡಿಕೊಂಡು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮನೆಯಲ್ಲಿ ಪೊಟ್ಟಣಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದು, ವಶಪಡಿಸಿಕೊಂಡ ಮಾದಕದ ಮೌಲ್ಯ 2 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಯು ಹಲವು ಪಾರ್ಟಿಗಳಿಗೆ ಮಾದಕ ಪದಾರ್ಥಗಳನ್ನು ಪೂರೈಸಿರೋ ಮಾಹಿತಿ ಲಭ್ಯವಾಗಿದ್ದು, ಸದ್ಯ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ: ಪೊಲೀಸ್​ ಭಾತ್ಮೀದಾರನ ಸಹಿತ ಐವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.