ETV Bharat / state

ನಾವು ಬಿಜೆಪಿಯವರು ಸಭ್ಯಸ್ಥರು, ಕಾಂಗ್ರೆಸ್‌ನವರೇ ಗಲಾಟೆ ಮಾಡಿದ್ದು: ರೇಣುಕಾಚಾರ್ಯ

author img

By

Published : Dec 16, 2020, 2:31 PM IST

mp renukacharya reaction about vishan parishad fight
ರೇಣುಕಾಚಾರ್ಯ ಹೇಳಿಕೆ

ವಿಧಾನ್​ ಪರಿಷತ್​​ನಲ್ಲಿ ನಡೆದ ಗಲಾಟೆ ಕುರಿತು ಶಾಸಕ ಎಂ.ಪಿ.ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಸಭಾಪತಿ ರಾಜೀನಾಮೆ ಕೊಡಲು ಕಾಂಗ್ರೆಸ್​ ಬಿಡಲಿಲ್ಲ ಎಂದರು. ಕಾಂಗ್ರೆಸ್‌ಗೆ ರಾಜ್ಯದ ಜನರು ಛೀಮಾರಿ ಹಾಕ್ತಿದ್ದಾರೆ. ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ನಾವು ಬಿಜೆಪಿಯವರು ಸಭ್ಯಸ್ಥರು, ಕಾಂಗ್ರೆಸ್‌ನವರೇ ಗಲಾಟೆ ಮಾಡಿದ್ದು ಎಂದು ಆರೋಪಿಸಿದರು.

ಬೆಂಗಳೂರು: ಸಭಾಪತಿ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ಕೊಡಲು ಕಾಂಗ್ರೆಸ್ ಬಿಡಲಿಲ್ಲ. ಸಭಾಪತಿ ಘಟನೆಯಲ್ಲಿ ಬಲಿಪಶು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.

ರೇಣುಕಾಚಾರ್ಯ ಹೇಳಿಕೆ
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಹಾರ, ಉತ್ತರಪ್ರದೇಶದಲ್ಲಿ ಗೂಂಡಾ ವರ್ತನೆ ನಡೆದಿತ್ತು. ಕಾಂಗ್ರೆಸ್ ಆಡಳಿತ ಮಾಡಿದ್ದ ಕಡೆ ಗೂಂಡಾರಾಜ್ ಇತ್ತು. ಹೀಗಾಗಿ ಕಾಂಗ್ರೆಸ್ ಎಲ್ಲ ಕಡೆ ಅಡ್ರೆಸ್ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್‌ಗೆ ರಾಜ್ಯದ ಜನರು ಛೀಮಾರಿ ಹಾಕ್ತಿದ್ದಾರೆ. ನಡೆದ ಘಟನೆಗೆ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಸಭಾಪತಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಬರುವುದಿಲ್ಲ ಎಂದು ಉಪಸಭಾಪತಿ ಕೂತಿದ್ದರು. ಕಾಂಗ್ರೆಸ್‌ನವರು ಉಪಸಭಾಪತಿ ಮೇಲೆ ಹಲ್ಲೆ ಮಾಡಿದ್ದರು. ಉಪಸಭಾಪತಿ ರಕ್ಷಣೆಗಾಗಿ ಬಿಜೆಪಿ ಹೋಗಿದೆ. ನಾವು ಬಿಜೆಪಿಯವರು ಸಭ್ಯಸ್ಥರು, ಕಾಂಗ್ರೆಸ್‌ನವರೆ ಗಲಾಟೆ ಮಾಡಿದ್ದು ಎಂದು ಆರೋಪಿಸಿದರು.
'ಕೋಡಿಹಳ್ಳಿ ಬ್ಲ್ಯಾಕ್ ಮೇಲರ್'
ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್ ಎಂದು ರೇಣುಕಾಚಾರ್ಯ ಆರೋಪಿಸಿದ್ರು. ಅವರು ವಿಭಿನ್ನ ಪಾತ್ರಗಳನ್ನು ಮಾಡ್ತಾರೆ. ಹಸಿರು ಶಾಲು ಹಾಕಿ ರೈತ ಮುಖಂಡ ಅಂತಾರೆ ಎಂದರು.

ಕೋಡಿಹಳ್ಳಿಗೂ ಸಾರಿಗೆ ನೌಕರರಿಗೂ ಏನು ಸಂಬಂಧ?, ನೀನು ಎಷ್ಟು ವರ್ಷ ಆಯ್ತು ಉಳುಮೆ ಮಾಡಿ?. ಹಳ್ಳಿ ಬಿಟ್ಟು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ಐಷಾರಾಮಿ ಬಂಗಲೆ, ಐಷಾರಾಮಿ ಕಾರಿನಲ್ಲಿ ಓಡಾಡುತ್ತಾರೆ. ನನ್ನ ವೈಯಕ್ತಿಕ ವಿಚಾರ ಮಾತನಾಡಲು ನೀನ್ಯಾರು?, ಬಿಟ್ಟಿ ಹೋರಾಟ, ಬಿಟ್ಟಿ ಪ್ರಚಾರ ತೆಗೆದುಕೊಳ್ಳುತ್ತಾರೆ. ಕೋಡಿಹಳ್ಳಿ. ಎಷ್ಟು ಅಕ್ರಮ ಆಸ್ತಿ ಮಾಡಿದ್ದಿಯಾ? ಎಂದು ಪ್ರಶ್ನಿಸಿದರು.

'ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ'
ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಸರ್ಕಾರ ಮಾಡಿದೆ. ಆದರೆ ಜೆಡಿಎಸ್​ಗೆ ಯಾರು ಅನಿವಾರ್ಯ ಅನ್ನೋದು ನನಗೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಎಲ್ಲಾ ಮಾತಾಡೋಕೆ ನಾನು ಚಿಕ್ಕವನು. ರಾಜಕೀಯದಲ್ಲಿ ನಾನಿನ್ನೂ ಅಂಬೆಗಾಲಿಡ್ತಾ ಇದ್ದೇನೆ ಎಂದರು.

ಸಭಾಪತಿ ಮೇಲೆ ಅವಿಶ್ವಾಸಕ್ಕೆ ನಾವು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅವರು ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.