ETV Bharat / state

ಕಾಂಗ್ರೆಸ್​ನಲ್ಲಿ ಸಿಎಂ ಆಯ್ಕೆ ಕಗ್ಗಂಟು.. ಬಿಜೆಪಿಯಲ್ಲಿ ಬಾಂಬೆ ಟೀಂ ಮಧ್ಯೆ ಒಡಕು?

author img

By

Published : May 17, 2023, 6:01 PM IST

ಸುಧಾಕರ್ ಅವರು ಸಿದ್ದರಾಮಯ್ಯನವರ ಬಗ್ಗೆ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ಅವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ ಎಂದು ಎಂಟಿಬಿ ನಾಗರಾಜ್​​ ಟಾಂಗ್​ ಕೊಟ್ಟಿದ್ದಾರೆ.

mtb-nagaraj-tweets-about-sudhakar-statement
ನಾವೆಲ್ಲಾ ಬಿಜೆಪಿ ಸೇರಲು ಸಿದ್ದು ಕಾರಣ ಎಂದು ಮನೆ ದೇವರ ಮೇಲೆ ಸುಧಾಕರ್ ಪ್ರಮಾಣ ಮಾಡ್ತಾರಾ..?: ಎಂಟಿಬಿ ಟಾಂಗ್

ಬೆಂಗಳೂರು: ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರ ಹಿಂದೆ ಸಿದ್ದರಾಮಯ್ಯ ಪಾತ್ರ ಇತ್ತು ಎಂದು ಮನೆ ದೇವರ ಮೇಲೆ ಸುಧಾಕರ್ ಪ್ರಮಾಣ ಮಾಡಲು ಸಿದ್ಧರಿದ್ದಾರಾ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದು ಬಾಂಬೆ ಟೀಂ ನಲ್ಲಿ ಬಿರುಕುಂಟಾಗಿದೆ ಎನ್ನುವುದಕ್ಕೆ ನಿದರ್ಶನ ಎನ್ನಬಹುದಾಗಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಂಟಿಬಿ ನಾಗರಾಜ್, ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ. ಆದರೆ ಮಾಜಿ ಸಚಿವರಾದ ಸುಧಾಕರ್ ಅವರು ಇಂದು ಸಿದ್ದರಾಮಯ್ಯನವರ ಬಗ್ಗೆ ಟ್ವಿಟರ್​​ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿವೆ. ಸುಧಾಕರ್ ಅವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಎಂದು ಪ್ರಶ್ನಿಸಿದ್ದಾರೆ‌.

  • ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?

    — MTB Nagaraj (@MTB_Nagaraj) May 17, 2023 " class="align-text-top noRightClick twitterSection" data=" ">

ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ?. ಇಷ್ಟು ದಿನ ಮೌನವಾಗಿದ್ದು? ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಎಂಟಿಬಿ ನಾಗರಾಜ ಅವರು ಪ್ರಶ್ನಿಸಿದ್ದಾರೆ. ಇಂದು ಬೆಳಗ್ಗೆಯಷ್ಟೇ ಸುಧಾಕರ್ ಹಾಗು ಎಸ್.ಟಿ ಸೋಮಶೇಖರ್ ಮೈತ್ರಿ ಸರ್ಕಾರ ಪತನಕ್ಕೆ ಹಾಗು ನಾವು ಬಿಜೆಪಿ ಸೇರಲು ಸಿದ್ದರಾಮಯ್ಯ ಕಾರಣ ಎಂದಿದ್ದರು. ಇದಕ್ಕೆ ಅವರ ಜೊತೆಯಲ್ಲೇ ಕಾಂಗ್ರೆಸ್​​ಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿ ಸಂಪುಟ ಸಹೋದ್ಯೋಗಿಯೂ ಆಗಿದ್ದ ಎಂಟಿಬಿ ನಾಗರಾಜ್ ಅವರು​ ಟಾಂಗ್ ನೀಡಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಸುಧಾಕರ್​ ಹೇಳಿದ್ದೇನು: 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ. ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿನವೂ ಹೆಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಸುಧಾಕರ್​ ಕೇಳಿದ್ದರು.

ಇದನ್ನೂ ಓದಿ: ವಿದ್ಯುತ್​ ಬಿಲ್​ ನೀಡಲು ಬಂದ ಸಿಬ್ಬಂದಿಗೆ ಮಹಿಳೆ ಮತ್ತು ರೈತ ಮುಖಂಡರಿಂದ ತರಾಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.