ETV Bharat / state

ಪತಿ ಹತ್ಯೆ ಮಾಡಿ ಆತ್ಮಹತ್ಯೆ ಕಥೆ ಕಟ್ಟಿದ ಪತ್ನಿ, ಪ್ರಿಯಕರ ಬೆಂಗಳೂರಿನಲ್ಲಿ ಸೆರೆ

author img

By

Published : May 19, 2023, 12:40 PM IST

Updated : May 19, 2023, 2:12 PM IST

Murder accused arrested
ಸಾಂದರ್ಭಿಕ ಚಿತ್ರ

ಪತಿಯನ್ನು ಹತ್ಯೆ ಮಾಡಿ ಬಳಿಕ ಆತ್ಮಹತ್ಯೆ ಎಂದು ಬಿಂಬಿಸಲು ಹೋಗಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ‌.

ಬೆಂಗಳೂರು: ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿಗಟ್ಟಿಸಿ ಕೊಂದು ಆತ್ಮಹತ್ಯೆಯ ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಅನಿತಾ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆನಂದ್​ ಕೊಲೆಯಾದವರು.

ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲು: ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಬಾತ್ ರೂಮಿನಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಶವವನ್ನ ಪರಿಶೀಲಿಸಿದ್ದ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಆನಂದ್ ಅವರಿಗೆ ನಿದ್ರೆ ಮಾತ್ರೆ ನೀಡಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆತನ ಪತ್ನಿಯನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯಾಂಶ ಬಯಲಾಗಿದೆ.

2 ತಿಂಗಳ ಬಳಿಕ ಆರೋಪಿಗಳು ಸೆರೆ : ಪ್ರಿಯಕರ ಹರೀಶ್ ಜತೆ ಜೀವನ ಮಾಡಲು ಇಚ್ಚಿಸಿದ್ದ ಅನಿತಾ ಆತನೊಂದಿಗೆ ಸೇರಿ ಗಂಡ ಆನಂದ್ ನ ಹತ್ಯೆಗೆ ಸಂಚು ರೂಪಿಸಿದ್ದಳಂತೆ. ಅದರಂತೆ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಆನಂದ್ ನಿದ್ರೆಗೆ ಜಾರುವಂತೆ ನೋಡಿಕೊಂಡಿದ್ದಳು. ಬಳಿಕ ಇಬ್ಬರೂ ಸೇರಿ ರೈಲ್ವೆ ಹಳಿ ಮೇಲೆ ಆನಂದ್ ದೇಹ ಇರಿಸುವ ಸಂಚು ರೂಪಿಸಿದ್ದರು. ಆದರೆ ಆತ ಹೆಚ್ಚು ತೂಕವಿದ್ದ ಕಾರಣ ಆತನನ್ನ ಸಾಗಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮನೆಯಲ್ಲಿಯೇ ಉಸಿರುಗಟ್ಟಿಸಿ ಆತನನ್ನ ಹತ್ಯೆಗೈದಿದ್ದರು. ಬಳಿಕ ಮೃತದೇಹವನ್ನ ಬಾತ್ ರೂಮಿನಲ್ಲಿರಿಸಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದಂತೆ ಬಿಂಬಿಸಿದ್ದರು. ಕಾಡುಗೋಡಿ ಪೊಲೀಸರ ವಿಚಾರಣೆಯಲ್ಲಿ ಅಸಲಿ ಸತ್ಯ ಬಯಲಾಗಿದ್ದು, 2 ತಿಂಗಳ ಬಳಿಕ ಇಬ್ಬರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆಗೈದ ಪತ್ನಿ: ಪೊಲೀಸ್ ತನಿಖೆಯಿಂದ ಸತ್ಯ ಬಯಲು

ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆಗೈದ ಪತ್ನಿ: ಪ್ರಿಯಕರನೊಂದಿಗೆ ಸೇರಿ ಸಂಚು ರೂಪಿಸಿ ತನ್ನ ಪತಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಇತ್ತೀಚೆಗೆ ಸೆರೆ ಹಿಡಿದಿದ್ದರು. ನಗರದ ಹಗೆದಿಬ್ಬ ವೃತ್ತದ ಸಮೀಪದ ಬುದ್ಧಬಸವ ನಗರದ ನಿವಾಸಿಯಾಗಿರುವ ಶ್ವೇತಾ (28) ಹಾಗೂ ಚಂದ್ರಶೇಖರ್ (29) ಬಂಧಿತರು. ಮಹಾಂತೇಶ (35) ಎಂಬ ವ್ಯಕ್ತಿಯನ್ನು ದಾವಣಗೆರೆ ರಿಂಗ್ ರಸ್ತೆಯಲ್ಲಿ ಕತ್ತು ಕೊಯ್ದು, ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.‌

ಆ ಸಂದರ್ಭದಲ್ಲಿ ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸ್ ಹೊಯ್ಸಳ ವಾಹನದ ಸಿಬ್ಬಂದಿ ಇನ್ನೂ ಉಸಿರಾಡುತ್ತಿದ್ದ ಮಹಾಂತೇಶ್‌ರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿದ್ದರು. ಆದ್ರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ, ಮೃತವ್ಯಕ್ತಿಯ ಬೆರಳು ಮುದ್ರೆಯ ಸಹಾಯದಿಂದ ಸಾಕಷ್ಟು ಮಾಹಿತಿ ಕಲೆ ಹಾಕಿದ್ದರು.

ಇದನ್ನೂ ಓದಿ: ವಿಜಯಪುರಲ್ಲಿ ಗುಂಡಿಕ್ಕಿ ಕಾರ್ಪೋರೇಟರ್ ಪತಿಯ ಹತ್ಯೆ ಮಾಡಿದ ದುಷ್ಕರ್ಮಿಗಳು

Last Updated :May 19, 2023, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.