ETV Bharat / state

ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

author img

By

Published : Jul 28, 2021, 7:59 AM IST

Updated : Jul 28, 2021, 11:41 AM IST

Karantaka New CM basavaraja BommaiKarantaka New CM basavaraja Bommai
ಇಂದು ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

ಲಿಂಗಾಯತ ಸಮುದಾಯ ಹಾಗೂ ಬಿಎಸ್​ವೈ ಬಣಕ್ಕೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್​ ರಾಜ್ಯದ ನೂತನ ಸಿಎಂ ಆಗಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದೆ. ಇಂದು ಬೆಳಗ್ಗೆ 11 ಗಂಟೆಗೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ಬ್ರೇಕ್​ ಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಹಾಗೂ ರಾಜ್ಯ ಗೃಹ ಖಾತೆ ಸಚಿವರಾಗಿದ್ದ ಬಸವರಾಜ​ ಬೊಮ್ಮಾಯಿ ಅವರಿಗೆ ಹೈಕಮಾಂಡ್ ಅಂತಿಮವಾಗಿ ಮಣೆ ಹಾಕಿದೆ. ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.

ಇಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ 23ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈಗಾಗಲೇ ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ್ದಾರೆ. ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿಸಿದ್ದು, ರಾಜಭವನದಲ್ಲಿ ನಡೆಯುವ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಮುಖ್ಯಮಂತ್ರಿ ಆಯ್ಕೆಗೆ ಅನೇಕ ಹೆಸರು ಕೇಳಿ ಬಂದಿದ್ದವು. ಪ್ರಮುಖವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​, ಪ್ರಹ್ಲಾದ್ ಜೋಶಿ, ಸಿ.ಟಿ ರವಿ, ಜಗದೀಶ್ ಶೆಟ್ಟರ್​, ಮುರುಗೇಶ್ ನಿರಾಣಿ ಹಾಗೂ ಅರವಿಂದ್ ಬೆಲ್ಲದ್​ ಹೆಸರು ಮುಂಚೂಣಿಯಲ್ಲಿದ್ದವು. ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿದ್ದ ಬೊಮ್ಮಾಯಿ ಹಾಗೂ ಬೆಲ್ಲದ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ ಬಿಎಸ್​ವೈಗೆ ಹೆಚ್ಚು ಆಪ್ತರಾಗಿರುವ ಬಸವರಾಜ ಬೊಮ್ಮಾಯಿಗೆ ಇದೀಗ ಹೈಕಮಾಂಡ್ ಮಣೆ ಹಾಕಿದೆ. ಈ ಮೂಲಕ ರಾಜ್ಯದಲ್ಲಿ ಬೊಮ್ಮಾಯಿ ಪರ್ವ ಶುರುವಾಗಲಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​​ ಸಿಂಗ್​ ಹಾಗೂ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್​, ಕಿಶನ್​ ರೆಡ್ಡಿ ಶಾಸಕಾಂಗ ಸಭೆಯಲ್ಲಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದರು.

ನಿನ್ನೆ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬೊಮ್ಮಾಯಿ ಹೆಸರು ಅಂತಿಮ ಮಾಡಲಾಗಿದ್ದು, ಇಂದು ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಎಸ್​.ಆರ್​ ಬೊಮ್ಮಾಯಿ ಅವರ ಪುತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಉಪ ಮುಖ್ಯಮಂತ್ರಿಗಳೂ ಇಂದೇ ಪ್ರಮಾಣವಚನ?

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಜತೆ ಉಪಮುಖ್ಯಮಂತ್ರಿಗಳಾಗಿ ಆರ್​.ಅಶೋಕ್, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಇಂದೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ನಿಯೋಜಿತ ಸಿಎಂ ಬೊಮ್ಮಾಯಿ ತಾವೊಬ್ಬರೇ ಪ್ರಮಾಣ ಸ್ವೀಕರಿಸುವುದಾಗಿ ಹೇಳಿದ್ದರು. ಹೈ ಕಮಾಂಡ್ ಯಾವ ಸೂಚನೆ ನೀಡುತ್ತೆ ಎನ್ನುವುದು ಈಗ ಕುತೂಹಲ ಕೆರಳಿಸಿದೆ.

ರಾಜಭವನದಲ್ಲಿ ಎಲ್ಲ ಸಿದ್ಧತೆ

ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ರಾಜಭವನದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಓದಿ: ಹೈಕಮಾಂಡ್​ನಿಂದ ಅಚ್ಚರಿಯ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ ಬೊಮ್ಮಾಯಿ

Last Updated :Jul 28, 2021, 11:41 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.