ETV Bharat / state

"ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ ನೇಮಕ"

author img

By

Published : Aug 20, 2021, 3:17 PM IST

Updated : Aug 20, 2021, 3:27 PM IST

ರಾಜ್ಯದಿಂದಲೂ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಗಳನ್ನು ನೇಮಕ‌ ಮಾಡಿದ್ದೇವೆ. ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರು ಅವರನ್ನು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Nodel Officer for Kannadiga who are in trouble at Afghanistan
ಆರಗ ಜ್ಞಾನೇಂದ್ರ

ಮಂಗಳೂರು: ಕೊಡಗು, ಮಲೆನಾಡು ಸೇರಿದಂತೆ ಮುಂತಾದ ಕಡೆಗಳಲ್ಲಿ ಸಂತೋಷಕೂಟ ಹಾಗೂ ಯಾರಾದರೂ ಮೃತರಾದಾಗ ಗುಂಡು ಹಾರಿಸುವ ಪ್ರಕ್ರಿಯೆ ಇದೆ. ಅದು ಸರೀನಾ ಕೇಳಿದಲ್ಲಿ ಖಂಡಿತವಾಗಿ ಅದು ತಪ್ಪು. ಏನಾದರೂ ಹೆಚ್ಚು ಕಡಿಮೆಯಾದಲ್ಲಿ ಪ್ರಾಣ ಹೋಗುವ ಪರಿಸ್ಥಿತಿ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ

ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಮಾಡಿದ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದಲ್ಲಿ ಈಗಾಗಲೇ ಎಫ್ಐಆರ್ ಆಗಿದ್ದು, ತನಿಖೆ ನಡೆಯುತ್ತಿದೆ‌‌ ಎಂದು ಹೇಳಿದರು.

ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ:

ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಭಾರತೀಯರು ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರನ್ನು ಯಾವುದೇ ತೊಂದರೆಯಾಗದಂತೆ ಕರೆದುಕೊಂಡು ಬರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ. ರಾಜ್ಯದಿಂದಲೂ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ‌ ಮಾಡಿದ್ದೇವೆ. ಸಂಕಷ್ಟದಲ್ಲಿರುವ ಕನ್ನಡಿಗರು ಅವರನ್ನು ಸಂಪರ್ಕ ಮಾಡಬಹುದು ಎಂದು ಹೇಳಿದರು.

ಕರಾವಳಿಯಲ್ಲಿ ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ಚರ್ಚೆ:

ಕರಾವಳಿಯಲ್ಲಿ ಎನ್ಐಎ ಕೇಂದ್ರ ಸ್ಥಾಪನೆ ಮಾಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ಬಹಳ ವರ್ಷಗಳಿಂದ ನಡೆಯುತ್ತಿದೆ. ಅದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ನಿಗಾ ಇಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ರಾಜ್ಯ ಸರ್ಕಾರ ವಿಶೇಷವಾಗಿ ಗಮನ ಹರಿಸಲಿದೆ. ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ, ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

ಓದಿ: ಡಿ ದೇವರಾಜ ಅರಸು ನಮಗೆ ಆದರ್ಶ.. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಅವರ ಕನಸು.. ಸಿಎಂ ಬೊಮ್ಮಾಯಿ

Last Updated : Aug 20, 2021, 3:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.