ETV Bharat / state

ಆರ್ಥಿಕ ಇಲಾಖೆ ಸಹಮತಿ ಪಡೆದೇ ನೇಮಕಾತಿ ಆದೇಶ ನೀಡುವಂತೆ ಸೂಚನೆ

author img

By

Published : Mar 31, 2021, 2:18 AM IST

2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು. ಇದೀಗ ಆರ್ಥಿಕ ಇಲಾಖೆಯು ಪ್ರಸ್ತಾವನೆಗಳನ್ನು ಏಪ್ರಿಲ್ 1, 2021ರ ನಂತರ ಮರುಪರಿಶೀಲನೆಗೆ ಸಲ್ಲಿಸುವಂತೆ ಅಡಳಿತ ಇಲಾಖೆಗಳಿಗೆ ಸೂಚನೆ ನೀಡಿದೆ.

notice-to-get-consensus-of-department-of-economics-for-recruitment-order
ಆರ್ಥಿಕ ಇಲಾಖೆ ಸಹಮತಿ ಪಡೆದೇ ನೇಮಕಾತಿ ಆದೇಶ ನೀಡುವಂತೆ ಸೂಚನೆ

ಬೆಂಗಳೂರು: 2021-22ನೇ ಸಾಲಿನಲ್ಲಿ ಅರ್ಥಿಕ ಇಲಾಖೆಯ ಸಹಮತಿ ಪಡೆದೇ ನೇಮಕಾತಿ ಆದೇಶ ನೀಡುವಂತೆ ಆಡಳಿತ ಇಲಾಖೆಗಳಿಗೆ ಆರ್ಥಿಕ ಇಲಾಖೆ ನಿರ್ದೇಶನ ನೀಡಿದೆ.

ಕೋವಿಡ್ ಹಿನ್ನೆಲೆ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಂಬಂಧ ಸಂಪನ್ಮೂಲವನ್ನು ಕ್ರೋಢೀಕರಿಸಲು 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು.

Notice to get Consensus of Department of Economics for Recruitment order
ಸೂಚನೆ ಪ್ರತಿ

ಆಡಳಿತ ಇಲಾಖೆಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ಜುಲೈ 2020ರಂದು ಈ ನೇರ ನೇಮಕಾತಿ ನಿರ್ಬಂಧದಿಂದ ವಿನಾಯಿತಿಯನ್ನು ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಿದ್ದವು. ಅಂತಹ ಪ್ರಸ್ತಾವನೆಗಳ ಪೈಕಿ ಕೆಲವು ಪುಸ್ತಾವನೆಗಳಿಗೆ ಮುಂದಿನ ಆರ್ಥಿಕ ವರ್ಷ ಅಂದರೆ, 2021-22ನೇ ಸಾಲಿನಲ್ಲಿ ಏಪ್ರಿಲ್ 1, 2021ರ ನಂತರ ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗುವುದಿ ಎಂದು ಆರ್ಥಿಕ ಇಲಾಖೆ ತಿಳಿಸಿತ್ತು.

ಇದೀಗ ಆರ್ಥಿಕ ಇಲಾಖೆ ಈ ಪ್ರಸ್ತಾವನೆಗಳನ್ನು ಏಪ್ರಿಲ್ 1, 2021ರ ನಂತರ ಆರ್ಥಿಕ ಇಲಾಖೆಯ ಮರುಪರಿಶೀಲನೆಗೆ ಸಲ್ಲಿಸುವಂತೆ ಅಡಳಿತ ಇಲಾಖೆಗಳಿಗೆ ಸೂಚನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.