ETV Bharat / state

ಜನ ಮೋದಿ ನೇತೃತ್ವದ ಸರ್ಕಾರವನ್ನು ನಂಬಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿ: ಬಿಎಸ್​​ವೈ

author img

By

Published : Mar 10, 2022, 3:48 PM IST

ನಿರೀಕ್ಷೆ ಮಾಡಿದಂತೆ ನಾಲ್ಕು ರಾಜ್ಯಗಳಲ್ಲಿ ಗೆದ್ದಿದ್ದೇವೆ‌. ಉತ್ತರ ಪ್ರದೇಶದಲ್ಲಿ ಗೂಂಡಾಗಿರಿ ತಡೆದಿದ್ದಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿಎಸ್​ವೈ ಹೇಳಿದ್ದಾರೆ.

BSY
ಬಿಎಸ್​ವೈ

ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಮೋದಿ ನೇತೃತ್ವದ ಸರ್ಕಾರವನ್ನು ಜನ ನಂಬಿರೋದಕ್ಕೆ ಇದು ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ತಿಳಿಸಿದ್ದಾರೆ.

ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿರೀಕ್ಷೆ ಮಾಡಿದಂತೆ ನಾಲ್ಕು ರಾಜ್ಯಗಳಲ್ಲಿ ಗೆದ್ದಿದ್ದೇವೆ‌. ಉತ್ತರ ಪ್ರದೇಶದಲ್ಲಿ ಗೂಂಡಾಗಿರಿ ತಡೆದಿದ್ದಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್​​ಗೆ ದೇಶದಲ್ಲೇ ನೆಲೆ ಇಲ್ಲದಂತಾಗಿದೆ ಎಂದರು.

ಇದನ್ನೂ ಓದಿ: ಪಂಜಾಬ್​ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು - ಇಲ್ಲೂ ಕಾಂಗ್ರೆಸ್ ಅವನತಿಯಾಗುತ್ತೆ: ಜಗದೀಶ್ ಶೆಟ್ಟರ್ ಲೇವಡಿ

ಡಿ.ಕೆ.ಶಿವಕುಮಾರ್ ಗೋವಾದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂಬ ಭ್ರಮೆಯಲ್ಲಿ ಹೋಗಿದ್ರು. ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. 2023ಕ್ಕೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಬಿಎಸ್​ವೈ ವಿಶ್ವಾಸ ವ್ಯಕ್ತಪಡಿಸಿದ್ರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.