ETV Bharat / state

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್​ಗೆ​ ಅರ್ಜಿ

author img

By

Published : Dec 15, 2022, 8:39 PM IST

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

petition-questioning-appointment-of-administrative-officer-for-murugha-math
ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್​ಗೆ​ ಅರ್ಜಿ

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿ ಇನ್ನೂ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.

ಚಿತ್ರದುರ್ಗದ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರರು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ಡಿ.12ರಂದು ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಕೋರಿದ್ದಾರೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಕಾರ್ಯದರ್ಶಿ, ಮುಜರಾಯಿ ಇಲಾಖೆಯ ಉಪ ಕಾರ್ಯದರ್ಶಿ, ಮುಜರಾಯಿ ಆಯುಕ್ತರು, ಚಿತ್ರದುರ್ಗ ಜಿಲ್ಲಾಧಿಕಾರಿ, ಆಡಳಿತಾಧಿಕಾರಿ ಮತ್ತು ಪಿ ಎಸ್ ವಸ್ತ್ರದ್, ರಿಜಿಸ್ಟ್ರಾರ್ ಆಫ್ ಸೊಸೈಟಿ, ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಮತ್ತು ಪೋಕ್ಸೊ ಪ್ರಕರಣದ ಆರೋಪಿ ಶಿವಮೂರ್ತಿ ಶರಣರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ತಮ್ಮ ವಿರುದ್ಧ ಪ್ರಕರಣ ದಾಖಲಾದ ನಂತರ ಈಗಾಗಲೇ ಮುರುಘಾ ಶರಣರು ಮಠದ ವ್ಯವಹಾರಗಳಿಗೆ ಸಂಬಂಧಿಸಿದ ಜಿಪಿಎ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮಿಗೆ ಜಿಪಿಎ ನೀಡಲಾಗಿದೆ. ಮಠಾಧಿಪತಿ ಜೈಲಿನಲ್ಲಿರುವುದು ಆಡಳಿತಾಧಿಕಾರಿ ನೇಮಿಸಲು ಸಕಾರಣವಲ್ಲ. ಹಾಗಾಗಿ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಸರಕಾರಕ್ಕೆ ಡಿಸಿಯಿಂದ ಗೌಪ್ಯ ವರದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.