ETV Bharat / state

ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿ ಪ್ರಮುಖ ನಗರಗಳ ಇಂದಿನ ತೈಲ ಬೆಲೆ

author img

By

Published : Jul 3, 2022, 10:17 AM IST

petrol
petrol

ದೇಶ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ..

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್‌ಗಳನ್ನು ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನ.

ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ.ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.65 ರೂ. ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ: ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.96 ರೂ.ಗೆ ಮಾರಾಟವಾಗುತ್ತಿದ್ದರೆ, ಡೀಸೆಲ್ 87.91ರೂ.ಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ.

ಶಿವಮೊಗ್ಗದಲ್ಲಿ ಪೆಟ್ರೋಲ್ ಲೀಟರ್​ಗೆ 103.82 ರೂಪಾಯಿ, ​ಡೀಸೆಲ್ 89.48 ರೂ. ಗೆ ಮಾರಾಟವಾಗುತ್ತಿದೆ.ದಾವಣಗೆರೆಯಲ್ಲಿ ಒಂದು ಲೀಟರ್‌ ಪೆಟ್ರೋಲ್​ಗೆ 103.91 ರೂಪಾಯಿ ಇದ್ದು, ಒಂದು ಲೀಟರ್‌ ಡೀಸೆಲ್​ಗೆ 89.41 ರೂಪಾಯಿ ಇದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಕರ್ನಾಟಕ ಶಾಸಕನ ಮತ ಮೌಲ್ಯ 131; ಲೆಕ್ಕಾಚಾರ ಹೀಗಿದೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.