ETV Bharat / state

ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಶುಭ ಕೋರಿದ ಪ್ರಧಾನಿ: ಕನ್ನಡದಲ್ಲಿ ಮೋದಿ ಟ್ವೀಟ್​

author img

By

Published : May 20, 2023, 4:39 PM IST

Updated : May 20, 2023, 5:26 PM IST

PM modi congratulates Karnataka CM siddaramaiah and DCM Dk Shivakumar
ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಶುಭ ಕೋರಿದ ಪ್ರಧಾನಿ

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

  • ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @siddaramaiah ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @DKShivakumar ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು.

    — Narendra Modi (@narendramodi) May 20, 2023 " class="align-text-top noRightClick twitterSection" data=" ">

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಟ್ವೀಟ್​ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಟ್ವೀಟ್​ ಮಾಡಿದ್ದು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

  • ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.

    — Basavaraj S Bommai (@BSBommai) May 20, 2023 " class="align-text-top noRightClick twitterSection" data=" ">

ಜನಹಿತದ ಕ್ರಮಕ್ಕೆ ಬೆಂಬಲ - ಹೆಚ್​ಡಿಕೆ: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್​ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್​ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳೆಂದು ಜೆಡಿಎಸ್​ ನಾಯಕ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡ ನಾಡಿನ ಜನಹಿತಕ್ಕಾಗಿ ಕಾಂಗ್ರೆಸ್​ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್​ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಹೆಚ್​ಡಿಕೆ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹ ಟ್ವೀಟ್​ ಮಾಡಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಸಚಿವ ಸಂಪುಟದ ಎಲ್ಲಾ ಸದಸ್ಯರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ. ಮಾಜಿ ಸಚಿವ ಅಶ್ವತ್ಥನಾರಾಯಣ ಟ್ವೀಟ್​ ಮಾಡಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಹಾಗೂ ಸಚಿವ ಸಂಪುಟದ ಸರ್ವ ಸದಸ್ಯರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

  • ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ @INCKarnataka ಸರಕಾರಕ್ಕೆ ಶುಭವಾಗಲಿ.
    ನೂತನ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರು, ಉಪ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು. 1/2

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2023 " class="align-text-top noRightClick twitterSection" data=" ">

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್, ಜಾರ್ಖಂಡ್ ಸಿಎಂ ಹೇಮಂತ್ ಸುರೇನ್, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್.ಸಿ.ಪಿ ನಾಯಕ ಶರದ್ ಪವಾರ್, ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಮೆಹಮೂಬಾ ಮುಫ್ತಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಆರ್​ಎಸ್ಪಿ ಅಧ್ಯಕ್ಷ ಎನ್.ಕೆ ಪ್ರೇಮಚಂದ್ರನ್, ಸಿಪಿಐ ಪ್ರಧಾನ ಕಾರ್ಯದರ್ಶಿ ದೀಪಾಂಕರ್ ಭಟ್ಟಾಚಾರ್ಯ, ವಿಸಿಕೆ ಅಧ್ಯಕ್ಷ ಡಾ.ಟಿ ತಿರುಮಲವಲನ್, ಆರ್.ಎಲ್.ಡಿ ಅಧ್ಯಕ್ಷ ಜಯಂತ್ ಚೌದರಿ, ನಟ ಕಮಲ ಹಾಸನ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ - ಶಿವಕುಮಾರ್ ಸಂಪುಟದ ನೂತನ ಸಚಿವರ ಸಂಕ್ಷಿಪ್ತ ವಿವರ

Last Updated :May 20, 2023, 5:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.