ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಆಹ್ವಾನ... ತೃತೀಯ ಲಿಂಗಿಗಳಿಗೆ ಮೊದಲ ಬಾರಿ ಮೀಸಲಾತಿ

author img

By

Published : Sep 13, 2022, 12:27 PM IST

Updated : Sep 13, 2022, 10:40 PM IST

police-constable-notification

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ರಾಜ್ಯ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಇದೇ ಮೊದಲ ಬಾರಿಗೆ ಪುರುಷ ತೃತೀಯಲಿಂಗಿ ಸಮುದಾಯದವರಿಗೂ ಅವಕಾಶ ನೀಡಲಾಗಿದೆ.

ಬೆಂಗಳೂರು: 2022ನೇ ಸಾಲಿನ ನೇಮಕಾತಿ ಕುರಿತಂತೆ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ರಾಜ್ಯ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದೆ. ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 31, 2022ರೊಳಗೆ ಸಲ್ಲಿಸಬಹುದು. ಇದೇ ಮೊದಲ ಬಾರಿಗೆ ಪುರುಷ ತೃತೀಯಲಿಂಗಿ ಪುರುಷರಿಗೆ ಪೊಲೀಸ್ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ತೃತೀಯ ಲಿಂಗಿ ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3,484 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತಿದೆ.

ತೃತೀಯ ಲಿಂಗಿಗಳಿಗೆ ಮಿಸಲಾತಿ: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371J ಮೀಸಲಾತಿಯಂತ ಒಟ್ಟು 420 ಹುದ್ದೆಗಳನ್ನ ಮೀಸಲಿರಿಸಲಾಗಿದ್ದು, ಇದರಲ್ಲಿ 11 ಪುರುಷ ತೃತೀಯ ಲಿಂಗಿಗಳಿಗೆ ಮೀಸಲು ನೀಡಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿ ಒಟ್ಟು 3,064 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 68 ಹುದ್ದೆಗಳು ತೃತೀಯ ಲಿಂಗಿ ಪುರುಷರಿಗೆ ಮೀಸಲಾತಿ ನೀಡಲಾಗಿದೆ.

3,484 ಕಾನ್ಸ್​ಟೇಬಲ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಲಾಗಿದೆ. 79 ಹುದ್ದೆಗಳುನ್ನು ತೃತೀಯ ಲಿಂಗಿಗಳಿಗೆ ಮೀಸಲಿರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR)- ಕರ್ನಾಟಕ: 3,064
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR) -ಕಲ್ಯಾಣ ಕರ್ನಾಟಕ: 420

ವಯೋಮಿತಿ : ಕನಿಷ್ಠ 18 ವರ್ಷ - ಗರಿಷ್ಠ 25 ವರ್ಷ

(ಕೆಟಗೆರಿ 2ಎ/2ಬಿ/3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ: 3 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೂ ವಿನಾಯಿತಿ)

ಅರ್ಜಿಶುಲ್ಕ: ಸಾಮಾನ್ಯ, ಪ್ರವರ್ಗ 2(ಎ), 2 (ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ - 400 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 200 ರೂಗಳು.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19/09/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31/10/2022
ವೆಬ್‌ಸೈಟ್‌ : www.recruitment.ksp.gov.in

ಇದನ್ನೂ ಓದಿ : ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್: ಕಾರವಾರದ ಮನೋಜ್ ಬಾಡ್ಕರ್ ಪದಗ್ರಹಣ

Last Updated :Sep 13, 2022, 10:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.