ETV Bharat / state

ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ: ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

author img

By

Published : Nov 4, 2022, 9:33 AM IST

ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ವಯೋಮಿತಿಯನ್ನು 2 ವರ್ಷ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. 2022-23ನೇ ಸಾಲಿನ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ.

police-constable-recruitment-age-limit-increased
ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ: ವಯೋಮಿತಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಕಾನ್ಸ್​ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡಾವಳಿ ಹೊರಡಿಸಿದ್ದಾರೆ. ಪೊಲೀಸ್ ಕಾನ್ಸ್​ಟೇಬಲ್(ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್​ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅಂದರೆ 2022-23ನೇ ಸಾಲಿಗೆ ಮಾತ್ರ ಹೆಚ್ಚಿಸಲಾಗಿದೆ. ಈ ವೇಳೆ ನೇಮಕಾತಿಗೆ ಕರೆದಿರುವ ಸಿಎಆರ್, ಡಿಎಆರ್ 420+3064 ಸೇರಿ ಒಟ್ಟೂ 3,484 ಹುದ್ದೆಗಳಿಗೆ ಮತ್ತು ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ 1,137+454 ಸೇರಿದಂತೆ ಒಟ್ಟು 1,591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ.

ಉದ್ಯೋಗಾಕಾಂಕ್ಷಿಗಳ ಬಹುದಿನದ ಬೇಡಿಕೆಯಾಗಿದ್ದ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಷರತ್ತಿನಂತೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಗೃಹ ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್​ಸ್ಟೇಬಲ್ ಆಕಾಂಕ್ಷಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.