ETV Bharat / state

ಪೊಲೀಸ್‌ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

author img

By

Published : Feb 12, 2020, 8:17 PM IST

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಡಿವೈಎಸ್‌ಪಿ, ಪಿಎಸ್ಐ ಹಾಗೂ ಪೇದೆ ಹುದ್ದೆಗಳನ್ನು ತುಂಬಲು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಹಂತ ಹಂತವಾಗಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು cನೀಡಿದೆ.

Govt. gave a report to High Court
ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಡಿವೈಎಸ್‌ಪಿ, ಪಿಎಸ್ಐ ಹಾಗೂ ಪೇದೆ ಹುದ್ದೆಗಳನ್ನು ತುಂಬಲು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಹಂತ ಹಂತವಾಗಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಅಗತ್ಯವಿರುಷ್ಟು ಸಂಖ್ಯೆಯಲ್ಲಿ ಪೊಲೀಸರ ನೇಮಕ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಹಾಜರಿದ್ದ ವಕೀಲ ಶ್ರೀನಿಧಿ ಅವರು ಮಾಹಿತಿ ನೀಡಿ, ಹಿಂದಿನ ವಿಚಾರಣೆ ವೇಳೆ ಪೀಠ ನೀಡಿದ್ದ ಆದೇಶವನ್ನು ಸರ್ಕಾರ ಪಾಲನೆ ಮಾಡುತ್ತಿದೆ. ಅದರಂತೆ ಆರಂಭಿಕ ಹಂತವಾಗಿ 446 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಹಾಗೆಯೇ‌ ಖಾಲಿಯಿರುವ ವಿವಿಧ ಶ್ರೇಣಿಯ ಹುದ್ದೆಗಳ ನೇಮಕಕ್ಕೆ ಕಾಲಮಿತಿ ನಿಗದಿಪಡಿಸಿದ್ದು, ಅದರಂತೆ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದರು.

ವಕೀಲರ ಹೇಳಿಕೆ ಮತ್ತು ಮೆಮೋ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿತು. ಪ್ರಕರಣದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವಷ್ಟು ಪ್ರಮಾಣದಲ್ಲಿ ಪೊಲೀಸರನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಬೇಕು ಎಂದು ಸುಪ್ರೀಂ ಕೋರ್ಟ್‌ ಈ ಹಿಂದೆ ಎಲ್ಲ ಹೈಕೋರ್ಟ್‌ಗಳಿಗೆ ಸೂಚಿಸಿತ್ತು. ಅದರಂತೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ ಹೈಕೋರ್ಟ್‌, ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 16,838 ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಸರ್ಕಾರಕ್ಕೆ ಆದೇಶಿಸಿದೆ. ಅದರಂತೆ ಸರ್ಕಾರ ಇದೀಗ ಪೊಲೀಸ್‌ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಹಿಂದಿನ ವಿಚಾರಣೆ ವೇಳೆ ಗೃಹ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಒಟ್ಟು 65,214 ಮಂಜೂರಾದ ಹುದ್ದೆಗಳಿವೆ. ಆ ಪೈಕಿ 48,376 ಹುದ್ದೆಗಳು ಭರ್ತಿಯಾಗಿದ್ದು, ಖಾಲಿ ಹುದ್ದೆಗಳ ಸಂಖ್ಯೆ 16,838 ಇವೆ. ಈ ಹುದ್ದೆಗಳಲ್ಲಿ 9,146 ಪೊಲೀಸ್‌ ಕಾನ್ಸ್‌ ಟೇಬಲ್‌ ಶ್ರೇಣಿಯವು ಎಂದು ಪೀಠಕ್ಕೆ ಮಾಹಿತಿ ನೀಡಿಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.