ETV Bharat / state

77ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್​ ಭದ್ರತೆ

author img

By

Published : Aug 15, 2023, 9:16 AM IST

ಧ್ವಜಾರೋಹಣಕ್ಕೆ ಸಿದ್ಧಗೊಂಡಿರುವ ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

77th independence day
77ನೇ ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಕವಾಯತು ನಡೆಯಲಿರುವ ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಹಿನ್ನೆಲೆ ಕೆಎಸ್ಆರ್​ಪಿ ಹಾಗೂ ಸಿಎಆರ್ ಸಹಿತ 38 ತುಕಡಿಗಳು ಭದ್ರತೆಗೆ ನಿಯೋಜನೆಗೊಂಡಿದ್ದು, 1,350ಕ್ಕೂ ಹೆಚ್ಚು ಪೊಲೀಸರು ಮೈದಾನದ ಸುತ್ತ ಬಿಗಿ ಭದ್ರತೆ ವಹಿಸಿದ್ದಾರೆ‌.

ಅಲ್ಲದೇ ಮೈದಾನದ ಸುತ್ತಲೂ 100 ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಕಣ್ಗಾವಲಿದ್ದು, ಪಾಸ್ ಪಡೆದು ಒಳಗಡೆ ಹೋಗುವವರಿಗೆ ಎರಡು ಕಡೆಗಳಲ್ಲಿ ತಪಾಸಣೆ ಇರಲಿದೆ.ಮುಂಜಾಗ್ರತಾ ಕ್ರಮವಾಗಿ ಆ್ಯಂಬುಲೆನ್ಸ್, ಅಗ್ನಿಶಾಮಕ ದಳ, ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜನೆಯಾಗಿವೆ. ಮೈದಾನ ಪ್ರವೇಶಿಸುವವರು ಯಾವುದೇ ಚೂಪಾದ ವಸ್ತುಗಳು, ಅನುಮಾನಾಸ್ಪದ ವಸ್ತುಗಳನ್ನು ಕೊಂಡೊಯ್ಯದಂತೆ ನಿರ್ಬಂಧ ವಿಧಿಸಲಾಗಿದೆ.

ಸುತ್ತಮುತ್ತ ಸಂಚಾರ ನಿರ್ಬಂಧ: ಮೈದಾನದ ಸುತ್ತಲೂ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೂ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಿರಲಿದೆ. ಕಬ್ಬನ್ ರಸ್ತೆ, ಬಿ ಆರ್ ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್​ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರ ನಿರ್ಬಂಧವಿರಲಿದ್ದು, ಬದಲಿಯಾಗಿ ಅನಿಲ್‌ ಕುಂಬ್ಳೆ ಸರ್ಕಲ್ - ನೇರವಾಗಿ ಸೆಂಟ್ರಲ್ ಸ್ಟ್ರೀಟ್‌ - ಬಲಕ್ಕೆ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆ - ಆಲಿ ಸರ್ಕಲ್ - ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು - ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್‌ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: Independence day: ಯುವಶಕ್ತಿಯಿಂದ ಭಾರತ ವಿಶ್ವಗುರು: ಪ್ರಧಾನಿ ನರೇಂದ್ರ ಮೋದಿ

ವಾಹನ ನಿಲುಗಡೆ ನಿಷಿದ್ದ ರಸ್ತೆಗಳು: ಸೆಂಟ್ರಲ್ ಸ್ಪೀಟ್, ಅನಿಲ್‌ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್‌ ನಿಲ್ದಾಣದ ವರೆಗೆ ಮತ್ತು ಕಬ್ಬನ್ ರಸ್ತೆ, ಸಿ.ಟಿ.ಓ, ವೃತ್ತದಿಂದ ಕೆ.ಆರ್.ರಸ್ತೆ ಹಾಗೂ ಕಬ್ಬನ್‌ ರಸ್ತೆ ಜಂಕ್ಷನ್‌ ವರೆಗೆ 3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆಗೆ ನಿಷೇಧವಿದೆ. ಮಾಣಿಕ್‌ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ.

ಬೃಹತ್‌ ಪಥಸಂಚಲನ: ಪಂಥಸಂಚಲನದಲ್ಲಿ ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್‌ಎಫ್, ಕೆಎಸ್‌ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಮ್ ಗಾರ್ಡ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ಯಾಡ್ ಮತ್ತು ಬ್ಯಾಂಡ್‌ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Independence Day 2023: ತ್ರಿವರ್ಣ ರಂಗಿನಿಂದ ರಾರಾಜಿಸುತ್ತಿದೆ ಭಾರತ... ಕೆಂಪುಕೋಟೆಯಲ್ಲಿ ಬಿಗಿ ಬಂದೋಬಸ್ತ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.