ETV Bharat / state

ಶಾಸಕ ಸತೀಶ್ ರೆಡ್ಡಿ ಬೆಂಬಲಕ್ಕೆ ನಿಂತ ಹಿಂದೂ ಪರ ಸಂಘಟನೆಗಳು

author img

By

Published : Aug 13, 2021, 12:49 PM IST

ಶಾಸಕ ಸತೀಶ್ ರೆಡ್ಡಿ ಮನೆಗೆ ಇಂದು ಸಂತೋಷ್​ ಗುರೂಜಿ ನೇತೃತ್ವದಲ್ಲಿ ಆಗಮಿಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಅವರ ಜೊತೆ ಮಾತುಕತೆ ನಡೆಸಿದರು.

MLA Satish Reddy
ಹಿಂದೂ ಪರ ಸಂಘಟನೆಗಳು

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಮನೆಗೆ ನುಗ್ಗಿ ಕಾರಿಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಇದೀಗ ಪೊಲೀಸ್‌ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಇಂದು ಸಂತೋಷ್​ ಗುರೂಜಿ ನೇತೃತ್ವದಲ್ಲಿ ಆಗಮಿಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ.

ಬೇಗೂರು ಕೆರೆ ಮಧ್ಯೆ ಕೃತಕವಾಗಿ ನಿರ್ಮಿಸಿದ್ದ ಶಿವನಮೂರ್ತಿ ಪ್ರತಿಷ್ಠಾಪನೆ ಹಾಗೂ ಪೂಜೆ ವಿಚಾರದಲ್ಲಿ ಸತೀಶ್ ರೆಡ್ಡಿ ಮಧ್ಯಪ್ರವೇಶಿಸಿದ್ದೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸತೀಶ್ ರೆಡ್ಡಿ ಮನೆಗೆ ಆಗಮಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ: ಸತೀಶ್ ರೆಡ್ಡಿಗೆ ಸೇರಿದ ಕಾರುಗಳನ್ನು ಬೆಂಕಿ ಇಡಲು ಸಂಚು ರೂಪಿಸಿದ ಆರೋಪಿಗಳು ಎಲ್ಲ ರೀತಿಯ ಪ್ಲ್ಯಾನ್ ಮಾಡಿಕೊಂಡಿದ್ದರು. ಬೇಗೂರು ಬಳಿಯ ಪೆಟ್ರೋಲ್ ಬಂಕ್​ವೊಂದರಲ್ಲಿ ಇಬ್ಬರು ದುಷ್ಕರ್ಮಿಗಳು ಬಂದು ಬೈಕ್​ನ ಜೊತೆಗೆ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದಾರೆ. ಬಳಿಕ ಸತೀಶ್ ರೆಡ್ಡಿ ಮನೆ ಹಿಂಭಾಗದ ಗೇಟ್ ಹಾರಿ ಎರಡು ಕಾರುಗಳಿಗೆ ಪೆಟ್ರೋಲ್​​ ಎರಚಿ, ಬೆಂಕಿ ಇಟ್ಟು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ತಮ್ಮ ಬೈಕ್​​ ಬಗ್ಗೆ ಪೊಲೀಸರಿಗೆ ಗೊತ್ತಾಗದಂತೆ ಮನೆಗೆ ಬರುವ ಮುನ್ನ ಒಂದು ಕಿಮೀ. ದೂರದಲ್ಲಿ ಬೈಕ್ ನಿಲ್ಲಿಸಿ ಎಸ್ಕೇಪ್ ಆಗಿರುವುದು ಕಂಡುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.