ETV Bharat / state

ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್!

author img

By

Published : Feb 26, 2022, 7:05 PM IST

Updated : Feb 26, 2022, 7:38 PM IST

2006ರ ನಂತರ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನ ಸರ್ಕಾರಿ ನೌಕರರಿಗೆ ನೀಡಬೇಕು ಹಾಗೂ ನೌಕರರ ಪಾಲಿನ ಶೇ.14 ರಷ್ಟು ಹಣವನ್ನು ಆಡಳಿತ ಮಂಡಳಿಗೆ ನೀಡುವಂತೆ ಒತ್ತಾಯಿಸಿದ್ದಾರೆ..

ಶಾಲಾ-ಕಾಲೇಜು
ಶಾಲಾ-ಕಾಲೇಜು

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್​​ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ.

ಮಾರ್ಚ್ 4ರಂದು ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆ

ಇಂದು ಪ್ರೆಸ್ ಕ್ಲಬ್​​ನಲ್ಲಿ ಮಾತಾನಡಿದ ಅವರು, ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೌಕರರ ಪ್ರಮುಖ ಬೇಡಿಕೆಗಳಾದ 2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ನಿವೃತ್ತರಾಗಿರುವ ನೌಕರರ ಸೇವಾ ಅವಧಿಯನ್ನ ಕಾಲ್ಪನಿಕವಾಗಿ ಪರಿಗಣಿಸಿ, ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವುದು.

2006ರ ನಂತರ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನ ಸರ್ಕಾರಿ ನೌಕರರಿಗೆ ನೀಡಬೇಕು ಹಾಗೂ ನೌಕರರ ಪಾಲಿನ ಶೇ.14 ರಷ್ಟು ಹಣವನ್ನು ಆಡಳಿತ ಮಂಡಳಿಗೆ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ರಷ್ಯಾ ದಾಳಿ ಮಧ್ಯೆ ಆಶ್ರಯತಾಣದಲ್ಲಿ ಮಗುವಿಗೆ ಜನ್ಮ ನೀಡಿದ ಉಕ್ರೇನ್​ ಮಹಿಳೆ!

ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ಆರೋಗ್ಯ ಸಿರಿ( ಜ್ಯೋತಿ ಸಂಜೀವಿನಿ) ಯೋಜನೆಯನ್ನ ಜಾರಿಗೆ ತರಬೇಕು. ಖಾಲಿ ಹುದ್ದೆಗಳನ್ನ ತುಂಬಿಕೊಳ್ಳಲು ವಿಧಿಸಿರುವ ನಿಯಮಗಳನ್ನ ಸಡಿಲಗೊಳಿಸಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳನ್ನ ಅನುದಾನಿತ ಶಾಲಾ ಮಕ್ಕಳಿಗೂ ನೀಡಬೇಕೆಂದು ಮನವಿ ಮಾಡಿದ್ದಾರೆ.

Last Updated : Feb 26, 2022, 7:38 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.