ETV Bharat / state

ಜೆಡಿಎಸ್​ ಪಂಚರತ್ನ ಯಾತ್ರೆಗೆ ಮಾಂಡೌಸ್​ ಅಡ್ಡಿ.. ವೇಳಾಪಟ್ಟಿಯಲ್ಲಿ ಬದಲಾವಣೆ

author img

By

Published : Dec 10, 2022, 10:04 PM IST

Etv Bharatrain hampers jds pancharatna yatra
Etv Bharatಜೆಡಿಎಸ್​ ಪಂಚರತ್ನ ಯಾತ್ರೆಗೆ ಮಾಂಡೌಸ್​ ಅಡ್ಡಿ... ವೇಳಾಪಟ್ಟಿಯಲ್ಲಿ ಬದಲಾವಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಪುನಾರಂಭವಾಗಬೇಕಿದ್ದ ಎರಡನೇ ಹಂತದ ಪಂಚರತ್ನ ರಥಯಾತ್ರೆ ಮುಂದೂಡಲಾಗಿದೆ.

ಜೆಡಿಎಸ್​ ಪಂಚರತ್ನ ಯಾತ್ರೆಗೆ ಮಾಂಡೌಸ್​ ಅಡ್ಡಿ... ವೇಳಾಪಟ್ಟಿಯಲ್ಲಿ ಬದಲಾವಣೆ

ಬೆಂಗಳೂರು: ಮಳೆಯ ಕಾರಣದಿಂದಾಗಿ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನ ಮುಂದೂಡಲಾಗಿದೆ. ಚಿಕ್ಕನಾಯಕನಹಳ್ಳಿಯಿಂದ ನಾಳೆಯಿಂದ ರಥಯಾತ್ರೆ ಪುನಾರಂಭವಾಗಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಡಿಸೆಂಬರ್ 15 ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದೆ. ಡಿಸೆಂಬರ್ 27ರಂದು ಮತ್ತೆ ತುಮಕೂರು ಜಿಲ್ಲೆಯಲ್ಲಿ ರಥಯಾತ್ರೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜೆಡಿಎಸ್​ ಪಂಚರತ್ನ ಯಾತ್ರೆಗೆ ಮಾಂಡೌಸ್​ ಅಡ್ಡಿ... ವೇಳಾಪಟ್ಟಿಯಲ್ಲಿ ಬದಲಾವಣೆ
ಜೆಡಿಎಸ್​ ಪಂಚರತ್ನ ಯಾತ್ರೆಗೆ ಮಾಂಡೌಸ್​ ಅಡ್ಡಿ... ವೇಳಾಪಟ್ಟಿಯಲ್ಲಿ ಬದಲಾವಣೆ

ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದ್ದು. ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ತೆರಳಿ, ಡಿ. 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಮಾಂಡೌಸ್ ಚಂಡಮಾರುತದ ಎಫೆಕ್ಟ್: ನಾಲ್ವರ ದುರ್ಮರಣ, ಧರೆಗುರುಳಿದ 400 ಮರಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.