ETV Bharat / state

ಬೆಂಗಳೂರಿಗೆ ತಂಪೆರೆದ ವರುಣ: 5 ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

author img

By

Published : Apr 21, 2023, 10:15 PM IST

ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

It rained in Bengaluru on Friday evening
ಬೆಂಗಳೂರಿಗೆ ತಂಪೆರೆದ ವರುಣ

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 21 ರಿಂದ 25 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆ, ಏಪ್ರಿಲ್ 21, 22 ರಂದು ಉಡುಪಿ ಜಿಲ್ಲೆಯಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 21ರಿಂದ 25ರ ವರೆಗೆ ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ.

ಏಪ್ರಿಲ್ 21, 22 ಮತ್ತು 25 ರಂದು ಬೀದರ್, ಕಲಬುರ್ಗಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಏಪ್ರಿಲ್ 23 ರಿಂದ 25 ರ ವರೆಗೆ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿಗೆ ತಂಪೆರದ ವರುಣ: ಬಿಸಿಲಿನ ಝಳಕ್ಕೆ ಬೆಂದಿದ್ದ ಸಿಲಿಕಾನ್ ಸಿಟಿಗೆ ಇಂದು ಮಳೆರಾಯ ತಂಪೆರೆದಿದ್ದಾನೆ. ಇದು ವರ್ಷದ ಮೊದಲ ಮಳೆಯಾಗಿದ್ದು, ಜನರು ನಿರಾಳರಾಗಿದ್ದಾರೆ. ನಗರದಲ್ಲಿ ಕಳೆದೊಂದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆ ಆಗಿದೆ. ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ ಘಟನೆಯೂ ನಡೆಯಿತು.

ಇದನ್ನೂಓದಿ: ಕಾಂಗ್ರೆಸ್​ಗೆ ತಲೆನೋವಾಗಿದ್ದ ರಾಬರ್ಟ್ ವಾದ್ರಾ ಪ್ರಕರಣ: ಹರಿಯಾಣ ಬಿಜೆಪಿ ಸರ್ಕಾರದಿಂದ ಕ್ಲೀನ್​ ಚಿಟ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.