ETV Bharat / state

ದೊಡ್ಡಬಳ್ಳಾಪುರದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ!

author img

By

Published : Mar 18, 2021, 7:21 AM IST

Updated : Mar 18, 2021, 9:47 AM IST

Rape attempt on six years old girl, Rape attempt on six years old girl in Bangalore, Bangalore crime news, 6 ವರ್ಷದ  ಬಾಲಕಿ ಮೇಲೆ ಅತ್ಯಾಚಾರ ಯತ್ನ, ಬೆಂಗಳೂರಿನಲ್ಲಿ 6 ವರ್ಷದ  ಬಾಲಕಿ ಮೇಲೆ ಅತ್ಯಾಚಾರ ಯತ್ನ, ಬೆಂಗಳೂರು ಅಪರಾಧ ಸುದ್ದಿ,
ಸಂಗ್ರಹ ಚಿತ್ರ

ದೊಡ್ಡಬಳ್ಳಾಪುರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.

ದೊಡ್ಡಬಳ್ಳಾಪುರ : ಆಟವಾಡುತ್ತಿದ್ದ ಬಾಲಕಿಯನ್ನು ಪಾಳು ಬಿದ್ದ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಘಟನೆ ದೊಡ್ಡಬಳ್ಳಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಗಿರಿಯಪ್ಪ(30) ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನ ಬಲವಂತವಾಗಿ ಪಾಳುಬಿದ್ದ ಮನೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ, ಬಾಲಕಿ ಕಿರುಚಿಕೊಂಡಿದ್ದು, ಆಕೆಯ ಕುಟುಂಬದವರು ಸ್ಥಳಕ್ಕೆ ದೌಡಾಯಿಸಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.

ದೊಡ್ಡಬಳ್ಳಾಪುರ ಮಹಿಳಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

Last Updated :Mar 18, 2021, 9:47 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.