ETV Bharat / state

ಸಂಪುಟ ವಿಸ್ತರಣೆ ವಿಳಂಬಕ್ಕೆ ಶಾಸಕ ರೇಣುಕಾಚಾರ್ಯ ಅಸಮಾಧಾನ

author img

By

Published : Jul 7, 2022, 3:52 PM IST

ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ-ಶಾಸಕರು ಸಚಿವರಾಗಲು ಬಯಸುವುದು ಸಹಜ- ಸಂಪುಟ ವಿಸ್ತರಣೆ ವಿಳಂಬಕ್ಕೆ ರೇಣುಕಾಚಾರ್ಯ ಬೇಸರ

ಸಂಪುಟ ವಿಸ್ತರಣೆ ವಿಳಂಬಕ್ಕೆ ರೇಣುಕಾಚಾರ್ಯ ಅಸಮಧಾನ
ಸಂಪುಟ ವಿಸ್ತರಣೆ ವಿಳಂಬಕ್ಕೆ ರೇಣುಕಾಚಾರ್ಯ ಅಸಮಧಾನ

ಬೆಂಗಳೂರು: ಈಗ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ವಿಧಾನಸೌಧದ ಮೂರನೇ ಮಹಡಿಗೆ ಸೀಮಿತವಾಗಿರುತ್ತದೆ. ಸಚಿವರಾದ ಮೇಲೆ ತಿಳಿಯೋದು ಬಹಳ ಇರುತ್ತದೆ, ವಿಭಾಗವಾರು ಕಮಿಟಿ ಮಾಡಬೇಕಾಗುತ್ತದೆ. ಅನೇಕ ಶಾಸಕರು ಸಂಪುಟ ವಿಸ್ತರಣೆಗೆ ಅಪೇಕ್ಷೆ ಪಟ್ಟಿದ್ದರು. ಆದರೆ, ವಿಳಂಬವಾಗಿದೆ. ಈ ಬಗ್ಗೆ ನಾನು ಹೆಚ್ಚು ಮಾತಾಡಲು ಇಷ್ಟಪಡಲ್ಲ ಎಂದು ಪರೋಕ್ಷವಾಗಿ ಸಂಪುಟ ವಿಸ್ತರಣೆ ವಿಳಂಬಕ್ಕೆ ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಸಿ ಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆವೆನ್ ಮುನಿಸ್ಟರ್ಸ್ ಕ್ವಾಟ್ರಸ್ ನಲ್ಲಿರುವ ಅಧಿಕೃತ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಗ್ರಾಮ ಪಂಚಾಯ್ತಿ ಸದಸ್ಯ ಆಗಿರುವವನು ಅಧ್ಯಕ್ಷ ಆಗಲು ಬಯಸುತ್ತಾನೆ. ಹಾಗೆಯೇ ಶಾಸಕರು ಸಚಿವರಾಗಲು ಬಯಸುವುದು ಸಹಜ. ನಮ್ಮ ಪಕ್ಷದಲ್ಲಿ ಬೇರೆ ಬೇರೆ ಕಾರಣಕ್ಕೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಆದರೆ, ಈಗ ಚುನಾವಣಾ ಕಾಲ ಶಾಸಕರು ತಮ್ಮ ತಮ್ಮ ಕ್ಷೇತ್ರಗಳ ಕಡೆ ಗಮನ ಹೆಚ್ಚು ಕೊಟ್ಟಿದ್ದಾರೆ. ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ನಾವು ಬದ್ಧರಾಗಿರುತ್ತೇವೆ ಎಂದರು.

ಸದ್ಯ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿ ಇವೆ. ಈ ಹಿಂದೆಯೇ ಆ ಐದು ಸ್ಥಾನಗಳನ್ನು ತುಂಬಿಸಿಕೊಂಡಿದ್ದಿದ್ದರೆ ಸಂಘಟನೆ ಇನ್ನಷ್ಟು ಆಗುತ್ತಿತ್ತು. ಹೊಸ ಮುಖಗಳಿಗೆ ಸಂಪುಟದಲ್ಲಿ ಆದ್ಯತೆ ಕೊಡಬೇಕಿತ್ತು. ಹಾಲಿ ಸಚಿವರಿಗೆ ಹೆಚ್ಚುವರಿ ಕೊಡದೇ ಹೊಸಬರನ್ನು ಸಚಿವರಾಗಿ ಮಾಡಬೇಕಿತ್ತು. ಆದರೆ ಈಗ ವಿಳಂಬವಾಗಿದೆ ಎಂದರು.

ಬಿಎಸ್​ವೈ ಹಸ್ತಕ್ಷೇಪ ಇಲ್ಲ: ನಿಗಮ ಮಂಡಳಿ ನೇಮಕ ಕೂಡ ಮುಖ್ಯಮಂತ್ರಿಗಳ ಪರಮಾಧಿಕಾರ, ಇದರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹಸ್ತಕ್ಷೇಪ ಇಲ್ಲ. ಯಡಿಯೂರಪ್ಪ ಅವರು ಸರ್ಕಾರದಲ್ಲಿ ಮಧ್ಯಪ್ರವೇಶ ಮಾಡಲ್ಲ. ಬೊಮ್ಮಾಯಿಯವರ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ನಡೀತಿದೆ ಅಂತ ಈಗಾಗಲೇ ಯಡಿಯೂರಪ್ಪ ಹೇಳಿದ್ದಾರೆ ಎಂದು ಆಡಳಿತದಲ್ಲಿ ಬಿಎಸ್​ವೈ ಹಸ್ತಕ್ಷೇಪದ ಆರೋಪವನ್ನು ತಳ್ಳಿಹಾಕಿದರು.

ರಾಜೀನಾಮೆ ಕೇಳುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಎಂ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ, ಸಿದ್ದರಾಮಯ್ಯ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಈಗ ಬೊಮ್ಮಾಯಿಗೆ ರಾಜೀನಾಮೆ ಕೇಳುವ ನೈತಿಕತೆ ಅವರಿಗೆ ಇಲ್ಲ ಎಂದು ರೇಣುಕಾಚಾರ್ಯ ಕಿಡಿಕಾರಿದರು.

ನಮ್ಮ ಸರ್ಕಾರ ಪಿಎಸ್ ಐ ಹಗರಣದಲ್ಲಿ ಎಡಿಜಿಪಿ ಮಟ್ಟದ ಅಧಿಕಾರಿಯನ್ನು ಬಂಧೀಸಿದೆ. ನಾವು ಪ್ರಕರಣ ಮುಚ್ಚಿ ಹಾಕೋದಾದರೆ ಅವರನ್ನು ಬಂಧನ ಮಾಡ್ತಾ ಇರಲಿಲ್ಲ, ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.

ಭ್ರಷ್ಟಾಚಾರದ ಇನ್ನೊಂದು ಮುಖ ಕಾಂಗ್ರೆಸ್: ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಸಮಾವೇಶ ನಡೆಯಲಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಸಿದ್ದರಾಮೋತ್ಸವ ಮಾಡುತ್ತಿರುವುದು ಅವರ ವೈಯಕ್ತಿಕ ವಿಚಾರ. ಆದರೆ, ಸಿದ್ದರಾಮಯ್ಯ ಈ ನೆಪದಲ್ಲಿ ಸಿಎಂ ಅವರ ಬಗ್ಗೆ, ನಮ್ಮ ನಾಯಕರ ಬಗ್ಗೆ ಮಾತಾಡೋದು ಸರಿಯಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಭ್ರಷ್ಟಾಚಾರದ ಬಗ್ಗೆ ಮಾತಾಡಲು ಕಾಂಗ್ರೆಸ್​ಗೆ ನೈತಿಕತೆ ಇಲ್ಲ. ಕಾಂಗ್ರೆಸ್ ನ ಇನ್ನೊಂದು ಮುಖವೇ ಭ್ರಷ್ಟಾಚಾರ ಎಂದು ಟೀಕಿಸಿದರು.

ಇದನ್ನೂ ಓದಿ: ಆಟವಾಡ್ತಿದ್ದ ಬಾಲಕನ ಮೇಲೆ ಬಿತ್ತು ಯಂತ್ರ.. ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣಪಕ್ಷಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.