ETV Bharat / state

ಬೆಂಗಳೂರು: ಕೈ ಕಾಲು ಕಟ್ಟಿ ನಿವೃತ್ತ ಶಿಕ್ಷಕಿಯ ಬರ್ಬರ ಹತ್ಯೆ, ಚಿನ್ನಾಭರಣ ಲೂಟಿ

author img

By

Published : Sep 9, 2022, 2:26 PM IST

ನಿವೃತ್ತ ಶಿಕ್ಷಕಿ ಹತ್ಯೆಗೈದ ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

Retired teacher murder in Bengaluru
ಪ್ರಸನ್ನ ಕುಮಾರಿ-ಕೊಲೆಯಾದ ನಿವೃತ್ತ ಶಿಕ್ಷಕಿ

ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ.

ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಇತ್ತೀಚೆಗೆ ನಿವೃತ್ತಿಯಾಗಿದ್ದರು. ನಂತರ ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಕಳೆದ ರಾತ್ರಿ ಮನೆಗೆ ಬಂದಿದ್ದ ದುಷ್ಕರ್ಮಿಗಳು ಆಕೆಯ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಗೈದಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಠಾಣಾ ಪೊಲೀಸರು ಅಕ್ಕಪಕ್ಕದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ: ಜೈಲಿಂದ ಬಿಡುಗಡೆಯಾಗಿ 15 ದಿನದಲ್ಲೇ ಹಳೇ ಚಾಳಿ: ರೌಡಿ ಬ್ರದರ್ಸ್‌ ಮತ್ತೆ ಅರೆಸ್ಟ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.