ETV Bharat / state

ಬಿ.ಇಡಿ ಕೋರ್ಸ್: ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

author img

By

Published : Feb 5, 2021, 9:20 PM IST

B.Ed Course Enrollment
ಬಿ.ಇಡಿ ಕೋರ್ಸ್​ ದಾಖಲಾತಿ

ರಾಜ್ಯದ ಸರ್ಕಾರದ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್​ಲೈನ್ ಮೂಲಕ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ, ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ www.Schooleducation.kar.nic.in ನಲ್ಲಿ ಪ್ರಕಟಿಸಿದೆ.

ಬೆಂಗಳೂರು: 2020-21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸ್​ ವ್ಯಾಸಂಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಲ್ಲಿ ಆಯ್ಕೆಯಾದವರ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

B.Ed Course Enrollment
ಬಿ.ಇಡಿ ಕೋರ್ಸ್​ ದಾಖಲಾತಿ

ಈ ಹಿನ್ನೆಲೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಪರಿಶೀಲನಾ ಕೇಂದ್ರಗಳಲ್ಲಿ (CTE/DIET) ತಮ್ಮ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಫೆಬ್ರವರಿ 6ರಿಂದ 16ರವರೆಗೆ ದಿನಾಂಕ ನಿಗದಿಪಡಿಸಲಾಗಿದೆ. ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು, ಮೂಲ ದಾಖಲೆಗಳ ಪರಿಶೀಲನೆಗಾಗಿ ಹಾಜರಾಗಬೇಕಾದ ದಿನಾಂಕ, ಸಮಯ ಹಾಗೂ ಪರಿಶೀಲನಾ ಕೇಂದ್ರದ ವಿವರಗಳನ್ನು ನೀಡಲಾಗಿದೆ.

ಅಭ್ಯರ್ಥಿಗಳು ಆನ್​ಲೈನ್ ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯಂತೆ ಮೂಲ ದಾಖಲೆಗಳೊಂದಿಗೆ ತಮಗೆ ಹಂಚಿಕೆಯಾದ ಪರಿಶೀಲನಾ ಕೇಂದ್ರದಲ್ಲಿ ನಿಗದಿತ ದಿನಾಂಕದಂದು ತಪ್ಪದೇ ಹಾಜರಾಗುವಂತೆ ಸೂಚಿಸಿದೆ. ಹಾಜರಾಗದಿದ್ದಲ್ಲಿ ಅಂತಹ ಅಭ್ಯರ್ಥಿಯನ್ನು ದಾಖಲಾತಿಯ ಮುಂದಿನ ಹಂತದ ಪ್ರಕ್ರಿಯೆಗೆ ಪರಿಗಣಿಸಲಾಗುವುದಿಲ್ಲ ಎಂದು ಸೂಚನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.