ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ನೇಮಕ

author img

By

Published : Oct 9, 2021, 7:25 PM IST

ritu-raj-awasthi-appointed-as-chief-justice-of-karnataka-high-court

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿರುವ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

  • President appoints new chief justices to 8 high courts, transfers chief justices of 4 high courts

    Calcutta HC Acting Chief Justice Rajesh Bindal appointed Chief Justice of Allahabad HC, Madhya Pradesh HC judge Prakash Shrivastava as Chief Justice of Calcutta HC pic.twitter.com/yqWECyJs3w

    — ANI (@ANI) October 9, 2021 " class="align-text-top noRightClick twitterSection" data=" ">

ರಾಜ್ಯ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಆಗಿರುವ ಅರವಿಂದ್ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಮತ್ತೋರ್ವ ಕನ್ನಡಿಗ ನ್ಯಾಯಮೂರ್ತಿ ರವಿ ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಇವರು ಪ್ರಸ್ತುತ ಹಿಮಾಚಲ ಪ್ರದೇಶ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಲಹಾಬಾದ್ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಆಗಿರುವ ರಿತು ರಾಜ್ ಅವಸ್ತಿ 1960ರ ಜುಲೈ 3ರಂದು ಜನಿಸಿದ್ದು, ಲಖನೌ ವಿವಿಯಿಂದ 1986ರಲ್ಲಿ ಕಾನೂನು ಪದವಿ ಪಡೆದಿದ್ದಾರೆ. 1987ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿರುವ ಇವರು ಕೇಂದ್ರ ಸರ್ಕಾರದ ಪರ ಸಹಾಯಕ ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 2009ರ ಏಪ್ರಿಲ್ 13ರಿಂದ ಲಕ್ನೋ ಪೀಠದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರನ್ನು ರಾಜ್ಯ ಹೈಕೋರ್ಟ್ ಸಿಜೆ ಆಗಿ ನೇಮಿಸಿದ್ದು, 2022ರ ಜುಲೈ 2ರಂದು ನಿವೃತ್ತಿ ಆಗಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಅಪಾರ್ಟ್​ಮೆಂಟ್ ಮೇಲೆ ಸೋಲಾರ್​.. ಉತ್ಪಾದನೆಯಾಗಲಿದೆ 354 ಕಿಲೋ ವ್ಯಾಟ್ ವಿದ್ಯುತ್​..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.