ETV Bharat / state

ಬೆಂಗಳೂರು: ಭಾರತ್​ ಬಂದ್​ ಹಿನ್ನೆಲೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ

author img

By

Published : Dec 8, 2020, 8:57 AM IST

Updated : Dec 8, 2020, 9:17 AM IST

route changes for motorists due to bharat band protest
ಕಮಲ್​ ಪಂತ್​

ಭಾರತ್​ ಬಂದ್​ ಹಿನ್ನೆಲೆ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲಿರುವ ಕಾರಣ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಧಕ್ಕೆಯಾಗದಂತೆ ತಡೆಯಲು, ನೃಪತುಂಗ ರಸ್ತೆಯನ್ನು ಕೆ.ಆರ್. ವೃತ್ತದಿಂದ ಪೊಲೀಸ್ ಕಾರ್ನರ್​​​ವರೆಗೆ ಮತ್ತು ಪೊಲೀಸ್ ಕಾರ್ನರ್​​ನಿಂದ ಕೆ.ಆರ್ ವೃತ್ತದವರೆಗೆ ದ್ವಿಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರು: ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆ ಜಾರಿಗೊಳಿಸುವುದನ್ನು ವಿರೋಧಿಸಿ ನಡೆಸುತ್ತಿರುವ ಬಂದ್​ ಅನ್ನು ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷ, ಕನ್ನಡ ಚಳವಳಿ ವಾಟಾಳ್ ಪಕ್ಷ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಇತರೆ ಸಂಘಟನೆಗಳು ಇಂದು ಪ್ರತಿಭಟನೆಗಿಳಿಯಲಿವೆ.

ಈ ಹಿನ್ನೆಲೆ ಸಿಲಿಕಾನ್​ ಸಿಟಿಯ ಎನ್.ಆರ್ ಸ್ಕ್ವೇರ್, ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ವೃತ್ತದ ಮುಖಾಂತರ ಫ್ರೀಡಂ ಪಾರ್ಕ್​ಗೆ ಜಾಥಾ ಹಾಗೂ ಎತ್ತಿನ ಬಂಡಿಗಳಲ್ಲಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಚಳವಳಿ ನಡೆಸಲಿದ್ದಾರೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಅಧಿವೇಶನ ನಡೆಯುವ ಸಮಯದಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ನೃಪತುಂಗ ರಸ್ತೆಯನ್ನು ಕೆ.ಆರ್. ವೃತ್ತದಿಂದ ಪೊಲೀಸ್ ಕಾರ್ನರ್​​​ವರೆಗೆ ಮತ್ತು ಪೊಲೀಸ್ ಕಾರ್ನರ್​​ನಿಂದ ಕೆ.ಆರ್. ವೃತ್ತದವರೆಗೆ ದ್ವಿಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಪರ್ಯಾಯ ವ್ಯವಸ್ಥೆ:

ಹಲಸೂರು ಗೇಟ್ ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ.ಜಿ ರಸ್ತೆ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್​​ನಿಂದ ನೇರವಾಗಿ ನೃಪತುಂಗ ರಸ್ತೆಗೆ ಪ್ರವೇಶ ತೆಗೆದುಕೊಂಡು ನೃಪತುಂಗ ರಸ್ತೆಯಲ್ಲಿ ಸಾಗಿ ಕೆ.ಆರ್. ವೃತ್ತ ತಲುಪಲಿವೆ.

ನೃಪತುಂಗ ರಸ್ತೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಏಕಮುಖ ಸಂಚಾರವನ್ನು ದ್ವಿಮುಖ ಸಂಚಾರ ವ್ಯವಸ್ಥೆಗೆ ಪರಿವರ್ತಿಸಿ ಅಂದ್ರೆ ಕೆ.ಆರ್. ವೃತ್ತದಿಂದ ಪೊಲೀಸ್ ಕಾರ್ನರ್​​ವರೆಗೆ​​ ಮತ್ತು ಪೊಲೀಸ್ ಕಾರ್ನರ್​​ನಿಂದ ಕೆ.ಆರ್. ವೃತ್ತದವರೆಗೆ ರಸ್ತೆಯ ಎರಡು ದಿಕ್ಕಿನಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ನಿಯಮ ನಾಳೆ ಮುಂಜಾನೆ ಆರು ಗಂಟೆಯವರೆಗೆ ಜಾರಿಯಲ್ಲಿರಲಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಎಚ್ಚರಿಕೆ ನೀಡಿದ್ದಾರೆ.

Last Updated :Dec 8, 2020, 9:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.