ETV Bharat / state

ಆರ್​ಎಸ್​ಎಸ್ ಹಿರಿಯ ಪ್ರಚಾರಕ ಚಂದ್ರಶೇಖರ ಭಂಡಾರಿ ನಿಧನ: ಬಿಜೆಪಿ ನಾಯಕರಿಂದ ಸಂತಾಪ

author img

By

Published : Oct 30, 2022, 7:28 PM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಇಂದು ನಿಧನರಾದರು.

RSS senior campaigner Chandrasekhara Bhandari
ಆರ್​ಎಸ್​ಎಸ್ ಹಿರಿಯ ಪ್ರಚಾರ ಚಂದ್ರಶೇಖರ ಭಂಡಾರಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಹಿರಿಯ ಪ್ರಚಾರಕ ಚಂದ್ರಶೇಖರ ಭಂಡಾರಿ ಅವರು ಇಂದು ಅಪರಾಹ್ನ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವು ಪ್ರಾಂತ ಕಾರ್ಯಾಲಯ 'ಕೇಶವಕೃಪಾ' ದಲ್ಲಿ ನಾಳೆ ಬೆಳಗ್ಗೆ 8 ರಿಂದ 9ರವರೆಗೆ ನಡೆಯಲಿದೆ. 10 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

  • ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು, ಖ್ಯಾತ ಲೇಖಕರು, ವಾಗ್ಮಿಗಳಾದ ಸಜ್ಜನ ಶ್ರೀ ಚಂದ್ರಶೇಖರ ಭಂಡಾರಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
    ಓಂ ಶಾಂತಿಃ pic.twitter.com/BXkBNWDkxm

    — Basavaraj S Bommai (@BSBommai) October 30, 2022 " class="align-text-top noRightClick twitterSection" data=" ">

ಬಿಜೆಪಿ ನಾಯಕರಿಂದ ಸಂತಾಪ: ಚಂದ್ರಶೇಖರ ಭಂಡಾರಿ ನಿಧನಕ್ಕೆ ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ. 'ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು, ಖ್ಯಾತ ಲೇಖಕರು, ವಾಗ್ಮಿಗಳಾದ ಸಜ್ಜನ ಚಂದ್ರಶೇಖರ ಭಂಡಾರಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್ ಮಾಡಿದ್ದಾರೆ.

  • ಖ್ಯಾತ ಲೇಖಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು, ಪ್ರಾಂತ ಪ್ರಚಾರ ಪ್ರಮುಖ್ ಆಗಿಯೂ ಸೇವೆ ಸಲ್ಲಿಸಿದ್ದ ಶ್ರೀ ಚಂದ್ರಶೇಖರ ಭಂಡಾರಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ pic.twitter.com/jm3TM9ktRk

    — B.S.Yediyurappa (@BSYBJP) October 30, 2022 " class="align-text-top noRightClick twitterSection" data=" ">

'ಲೇಖಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು, ಪ್ರಾಂತ ಪ್ರಚಾರ ಪ್ರಮುಖ್ ಆಗಿಯೂ ಸೇವೆ ಸಲ್ಲಿಸಿದ್ದ ಚಂದ್ರಶೇಖರ ಭಂಡಾರಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ' ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

  • ಸಂಘದ ಹಿರಿಯ ಪ್ರಚಾರಕರೂ, ಕರ್ನಾಟಕದ ಮಾಜಿ ಪ್ರಾಂತ ಪ್ರಚಾರಕರೂ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಮಾಜಿ ಸಂಘಟನಾ ಕಾರ್ಯದರ್ಶಿ, ವಿಎಸ್ ಕೆ ಕರ್ನಾಟಕದ ಸ್ಥಾಪಕ ಟ್ರಸ್ಟಿ, ಲೇಖಕ, ಕವಿ ಶ್ರೀ ಚಂದ್ರಶೇಖರ ಭಂಡಾರಿಯವರ ಆತ್ಮ‌ಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ ಈ ದು:ಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ. pic.twitter.com/i8QjtuUnvB

    — Nalinkumar Kateel (@nalinkateel) October 30, 2022 " class="align-text-top noRightClick twitterSection" data=" ">

'ಸಂಘದ ಹಿರಿಯ ಪ್ರಚಾರಕರೂ, ಕರ್ನಾಟಕದ ಮಾಜಿ ಪ್ರಾಂತ ಪ್ರಚಾರಕರೂ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಮಾಜಿ ಸಂಘಟನಾ ಕಾರ್ಯದರ್ಶಿ, ವಿಎಸ್​ಕೆ ಕರ್ನಾಟಕದ ಸ್ಥಾಪಕ ಟ್ರಸ್ಟಿ, ಲೇಖಕ, ಕವಿ ಚಂದ್ರಶೇಖರ ಭಂಡಾರಿಯವರ ಆತ್ಮ‌ಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ ಈ ದು:ಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ನಿಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.