ETV Bharat / state

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ: ಶಿಕ್ಷಣ ಸಂಸ್ಥೆಗಳಲ್ಲಿ ನ.1 ರಿಂದಲೇ ಜಾರಿಗೆ ಆದೇಶ

author img

By

Published : Nov 18, 2022, 6:38 AM IST

Vidhana Soudha
ವಿಧಾನಸೌಧ

ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿಗೆ ಶೇ.17% ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.7%ರಂತೆ ಮೀಸಲಾತಿ ಪ್ರಮಾಣವನ್ನು ನವೆಂಬರ್ 1ರಿಂದ ಅನುಷ್ಠಾನಗೊಳಿಸಬೇಕು ಎಂದು ಸಮಾಜ‌ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು: ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಯು ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ‌ ಕಲ್ಯಾಣ ಇಲಾಖೆ ಆದೇಶಿಸಿದೆ.

ಸುಗ್ರೀವಾಜ್ಞೆ ಪ್ರಕಾರ, ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15% ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3% ರಿಂದ ಶೇ.7%ಕ್ಕೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಯಾವುದೇ ಶಾಲೆ, ಕಾಲೇಜು ಅಥವಾ ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಈ ಮೀಸಲಾತಿ ಹೆಚ್ಚಳ ಅನ್ವಯವಾಗಲಿದೆ.

ಇದನ್ನೂ ಓದಿ: ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸಬೇಕು. ಆದರೆ, 01-11-2022 ಮುಂಚೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದಲ್ಲಿ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ಬಹುನಿರೀಕ್ಷಿತ ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಅಧಿಸೂಚನೆ ಹೊರಡಿಸಿದ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.