ETV Bharat / state

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ... ಈ ವೆಬ್​ಸೈಟ್​ನಲ್ಲಿ ರಿಸಲ್ಟ್ ನೋಡಿ

author img

By

Published : Apr 20, 2023, 6:35 PM IST

Updated : Apr 21, 2023, 11:54 AM IST

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.

Secondary PUC Result
ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು : ಮಾರ್ಚ್ 9 ರಿಂದ 29ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು (ಶುಕ್ರವಾರ) ಪ್ರಕಟಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಳಿಕ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯಿಂದಲೇ https://karresults.nic.in ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ವೀಕ್ಷಿಸಬಹುದು.

ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

  • ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.https://t.co/qPHcpNXklQ pic.twitter.com/SSl1MmJjSI

    — SchoolEducationGOK (@ShalaShikshana) April 20, 2023 " class="align-text-top noRightClick twitterSection" data=" ">

ಏಪ್ರಿಲ್ 5 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಸಲಾಗಿತ್ತು. ಇದಕ್ಕಾಗಿ 25 ಸಾವಿರ ಉಪನ್ಯಾಸಕರನ್ನು ನಿಯೋಜಿಸಲಾಗಿತ್ತು. 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿದೆ.

ಇದನ್ನೂ ಓದಿ : ಡಿ.ಕೆ.ಶಿವಕುಮಾರ್ ವಿರುದ್ಧದ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಇದನ್ನೂ ಓದಿ: ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ 6 ಸಾವಿರ ಉಪನ್ಯಾಸಕರು ಗೈರು: ಕ್ರಮದ ಎಚ್ಚರಿಕೆ

Last Updated :Apr 21, 2023, 11:54 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.