ETV Bharat / state

ಪಿಎಸ್ಐ ಪರೀಕ್ಷೆ ಅಕ್ರಮ: ನೇಮಕಾತಿ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿ ಬಂಧನ

author img

By

Published : May 12, 2022, 8:58 PM IST

Updated : May 12, 2022, 9:16 PM IST

Senior officer arrested in karnataka PSI recruitment scam
ಪಿಎಸ್ಐ ಪರೀಕ್ಷೆ ಅಕ್ರಮ: ನೇಮಕಾತಿ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿ ಬಂಧನ

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ನೇಮಕಾತಿ ವಿಭಾಗದಲ್ಲಿ ಡಿವೈಎಸ್​​ಯಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ಅಧಿಕಾರಿಯನ್ನು ಸಿಐಡಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ನೇಮಕಾತಿ ವಿಭಾಗದಲ್ಲಿ ಡಿವೈಎಸ್​ಪಿ​​ಯಾಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ವರ್ಗಾವಣೆಗೊಂಡಿದ್ದ ಅಧಿಕಾರಿಯೊಬ್ಬರನ್ನು ಸಿಐಡಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ‌‌. ಸದ್ಯ ಅವರು ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್​ಡಿ)ದಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆ ಅಧಿಕಾರಿಗೆ ನೋಟಿಸ್ ಜಾರಿ ಮಾಡಿತ್ತು‌‌. ಇದರಂತೆ ಹಾಜರಾದ ಅವರನ್ನು ಬಂಧಿಸಲಾಗಿದ್ದು, ಅವರು ಬಳಸುತ್ತಿದ್ದ ಮೊಬೈಲ್​ನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳಿಂದ ಹಿಂದೆ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿಯನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಅವರು ನೀಡಿದ ಹೇಳಿಕೆ ಆಧರಿಸಿ ಡಿವೈಎಸ್​​ಪಿ ಬಂಧನವಾಗಿದೆ.‌ ಇದರಿಂದ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರಿಗೂ ವಿಚಾರಣೆ ಬಿಸಿ ತಟ್ಟುವ ಸಾಧ್ಯತೆಯಿದೆ.

ಸ್ಟ್ರಾಂಗ್ ರೂಮ್​ನಲ್ಲಿ ಓಎಂಆರ್​ನಲ್ಲಿ ತಿದ್ದುಪಡಿ ಮಾಡಲು ಬಂಧಿತ ಅಧಿಕಾರಿ ನೆರವಾಗಿದ್ದರು ಎನ್ನಲಾಗುತ್ತಿದೆ. ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅಕ್ರಮ ನೇಮಕಾತಿ: ಬಂಧಿತ ಅಭ್ಯರ್ಥಿಗಳ ಜಾಮೀನು ಅರ್ಜಿ ವಜಾ

Last Updated :May 12, 2022, 9:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.