ETV Bharat / state

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಕಾಂಗೆ ನೀಡಿದ್ದು ಎಷ್ಟು ಕೋಟಿ?: ಲೆಕ್ಕ ಕೊಡಿ ಎಂದ ಸಿದ್ದರಾಮಯ್ಯ

author img

By

Published : Jan 14, 2023, 4:11 PM IST

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಸ್ಕಾಂಗೆ ನೀಡಿದ್ದು ಎಷ್ಟು ಕೋಟಿ?; ಲೆಕ್ಕ ಕೊಡಿ ಎಂದ ಸಿದ್ದರಾಮಯ್ಯ
siddaramaiah-series-of-tweet-on-energy-menister-suneel-kumar

ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಸರಿಮಾಡಿದ್ದು ನಾವು- ಹೊರರಾಜ್ಯಕ್ಕೆ ಮಾರಾಟವಾಗುವಷ್ಟು ವಿದ್ಯುತ್​ ಉತ್ಪಾದನೆ ಮಾಡಿದ್ದು ಕಾಂಗ್ರೆಸ್​- ಸುನೀಲ್​ ಕುಮಾರ್​ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್​​

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂಗಳಿಗೆ ನೀಡಿದ್ದು 6000 ಕೋಟಿಯೋ, 9000 ಕೋಟಿಯೋ?, ಯಾವುದು ನಿಜ ಲೆಕ್ಕ? ಯಾವುದು ಸುಳ್ಳು ಲೆಕ್ಕ? ಎಂಬುದನ್ನು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಮೊದಲು ಹೇಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9 ಸಾವಿರ ಕೋಟಿ ರೂ ಅನ್ನು ಎಸ್ಕಾಂಗಳಿಗೆ ನೀಡಿ, ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ. ಸನ್ಮಾನ್ಯ ಸುನೀಲ್ ಕುಮಾರ್ ಅವರೇ, ನಾವು ನುಡಿದಂತೆ ನಡೆಯುವವರು. ಈ ಬಗ್ಗೆ ಅನುಮಾನವೇ ಬೇಡ. ರಾಜ್ಯದ ಜನರಿಗೆ 200 ಯುನಿಟ್ ಉಚಿತ ಘೋಷಣೆ ಮಾಡಿ, ಕಾರ್ಯಕ್ರಮಕ್ಕೆ ನಿಮ್ಮನ್ನೂ ಆಹ್ವಾನಿಸುತ್ತೇವೆ. ತಪ್ಪದೇ ಬನ್ನಿ ಎಂದು ಟಾಂಗ್ ನೀಡಿದ್ದಾರೆ.

  • 2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹೊತ್ತಿಗೆ ಹಿಂದಿನ ಸರ್ಕಾರ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲದ ಗಂಟನ್ನು ಹೊರಿಸಿ ಹೋಗಿತ್ತು, ಸಾಲ ಮಾಡಿ ಈ ಎಸ್ಕಾಂಗಳ ಬಾಕಿ ಮೊತ್ತ ತೀರಿಸಿ, ಕುತ್ತಿಗೆವರೆಗೂ ಮುಳುಗಿದ್ದ ಎಸ್ಕಾಂಗಳನ್ನು ಮೇಲೆತ್ತಿದವರು ನಾವು @karkalasunil.
    2/11

    — Siddaramaiah (@siddaramaiah) January 13, 2023 " class="align-text-top noRightClick twitterSection" data=" ">

ನಾವು ಲಾಭದ ಹಳಿಗೆ ತಂದು ಉಚಿತ ವಿದ್ಯುತ್​ ಕೊಡ್ತೇವಿ: ಸಚಿವ ಸುನೀಲ್ ಕುಮಾರ್ ಅವರ ಅಸಾಮರ್ಥ್ಯಕ್ಕೆ ತಕ್ಕುದಾಗಿ ರಾಜ್ಯದ ವಿದ್ಯುತ್ ಇಲಾಖೆ ಕೆಲಸ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಇಲಾಖೆಯನ್ನು ಲಾಭದ ಹಳಿಗೆ ತಂದು, ರಾಜ್ಯದ ಜನರಿಗೆ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡುತ್ತೇವೆ. ರಾಜ್ಯದ ಅಗತ್ಯತೆಗೆ ಸಾಕಾಗಿ, ಹೊರರಾಜ್ಯಗಳಿಗೆ ಮಾರಾಟ ಮಾಡುವಷ್ಟು ವಿದ್ಯುತ್ ಅನ್ನು ನಾವೇ ಉತ್ಪಾದನೆ ಮಾಡುತ್ತಿದ್ದರು, ದುಪ್ಪಟ್ಟು ದರ ನೀಡಿ ಹೊರಗಿನಿಂದ ಖರೀದಿ ಮಾಡುತ್ತಿರುವ ನಿಮ್ಮ ಸರ್ಕಾರ ಎಸ್ಕಾಂ ಗಳನ್ನು ಉದ್ಧಾರ ಮಾಡಿದೆ ಎಂಬುದು ತಮಾಷೆಯಾಗಿದೆ ಎಂದು ಟೀಕಿಸಿದ್ದಾರೆ.

ಒಂದು ಕಾಲದಲ್ಲಿ ಕೇವಲ 2-3 ಗಂಟೆ ವಿದ್ಯುತ್ ಒದಗಿಸಲು ಸಂಕಷ್ಟ ಪಡುತ್ತಿದ್ದ ರಾಜ್ಯವು 2018 ರ ವೇಳೆಗೆ 28,741 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಹಂತಕ್ಕೆ ತಲುಪಿತ್ತು. ನಮ್ಮ 5 ವರ್ಷಗಳ ಆಡಳಿತದ ಅವಧಿಯಲ್ಲಿ 13,175 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದ್ದೆವು. 2014-15 ರಲ್ಲಿ ನವೀಕರಿಸಬಹುದಾದ ಇಂಧನ ಮೂಲದಿಂದ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಪ್ರಮಾಣ 4,855 ಮೆಗಾ ವ್ಯಾಟ್. 2018 ರ ವೇಳೆಗೆ ಇದು 13,500 ಮೆಗಾ ವ್ಯಾಟ್ ಗಿಂತ ಹೆಚ್ಚಾಯಿತು.

ಯಾವ ಗಣಿತದ ಲೆಕ್ಕ ಹೇಳ್ತಿದ್ದಾರೆ: ಇದನ್ನು ನಷ್ಟ ಎಂದು ಯಾವ ಗಣಿತದ ಲೆಕ್ಕ ಹೇಳುತ್ತದೆ. ಕಲ್ಲಿದ್ದಲು ಮೂಲದ ಉಷ್ಣ ವಿದ್ಯುತ್ ಉತ್ಪಾದನೆ 2014-15 ರಲ್ಲಿ 6,197 ಮೆಗಾವ್ಯಾಟ್ ಇದ್ದದ್ದು, 2018 ರ ವೇಳೆಗೆ 11,366 ಮೆಗಾವ್ಯಾಟ್ ಗೆ ತಲುಪಿತ್ತು. ಸುನೀಲ್ ಕುಮಾರ್ ಅವರೇ, ಇಂದು ನೀವು ವಿದ್ಯುತ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರೆ, ಅದರ ಹಿಂದಿರುವುದು ನಮ್ಮ ಸರ್ಕಾರದ ಶ್ರಮ. 2018 ರ ವೇಳೆಗೆ ಸೋಲಾರ್ ಮೂಲದಿಂದ 6157 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 4730 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿ ತುಂಬಿದವರು ನಾವು.

ಇದನ್ನು ಓದಿ:ವಿಧಾನಸಭೆ ಚುನಾವಣೆ: ರಣತಂತ್ರ ರೂಪಿಸಲು ಕಾಂಗ್ರೆಸ್ ವೀಕ್ಷಕರ ಸಭೆ​

ವಿದ್ಯುತ್ ಉತ್ಪಾದನೆ ಹೆಚ್ಚಾದರೆ ಇಲಾಖೆಗೆ ಲಾಭವಾಗುತ್ತಾ? ನಷ್ಟವಾಗುತ್ತಾ ಸುನೀಲ್ ಅವರೇ? ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2014-15 ರಲ್ಲಿ ರಾಜ್ಯದಲ್ಲಿ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ 14,825 ಮೆ.ವ್ಯಾ ಮಾತ್ರ. ಅದರಲ್ಲಿ ಸೋಲಾರ್ ಮೂಲದಿಂದ 118 ಮೆ.ವ್ಯಾ ಮತ್ತು ಗಾಳಿ ಮೂಲದಿಂದ 2655 ಮೆ. ವ್ಯಾ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ಅಗತ್ಯ ಇರುವ ಕ್ಷೇತ್ರಕ್ಕೆ ಹಣ ಹಾಕುವುದನ್ನು ನಷ್ಟ ಎನ್ನುವುದಿಲ್ಲ, ಬದಲಾಗಿ ಬಂಡವಾಳ ಹೂಡಿಕೆ ಎನ್ನುತ್ತಾರೆ ಎಂಬ ಅರ್ಥ ಶಾಸ್ತ್ರದ ಸರಳ ತತ್ವದ ಅರಿವಿಲ್ಲದ ಸುನೀಲ್ ಕುಮಾರ್ ಅವರ ಜ್ಞಾನಭಂಡಾರದ ಬಗ್ಗೆ ಅನುಕಂಪವಿದೆ ಎಂದು ವ್ಯಂಗ್ಯವಾಡಿದ್ದಾರೆ.

2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹೊತ್ತಿಗೆ ಹಿಂದಿನ ಸರ್ಕಾರ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲದ ಗಂಟನ್ನು ಹೊರಿಸಿ ಹೋಗಿತ್ತು, ಸಾಲ ಮಾಡಿ ಈ ಎಸ್ಕಾಂಗಳ ಬಾಕಿ ಮೊತ್ತ ತೀರಿಸಿ, ಕುತ್ತಿಗೆವರೆಗೂ ಮುಳುಗಿದ್ದ ಎಸ್ಕಾಂಗಳನ್ನು ಮೇಲೆತ್ತಿದವರು ನಾವು ಸಚಿವರೇ ಎಂದು ತಿರುಗೇಟು ನೀಡಿದ್ದಾರೆ.

ಇದನ್ನು ಓದಿ:ಮೋದಿ, ಅಮಿತ್ ಶಾ ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಕುಮಾರಸ್ವಾಮಿ ಭವಿಷ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.