ETV Bharat / state

ಸ್ಪರ್ಧೆಯ ಕ್ಷೇತ್ರ ನಮೂದಿಸದೇ ಕೊನೆ ದಿನ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ

author img

By

Published : Nov 21, 2022, 6:37 PM IST

Siddaramaiah
ಸಿದ್ದರಾಮಯ್ಯ

ದಿನಾಂಕ ವಿಸ್ತರಣೆಯ ಬಳಿಕವೂ ಕಡೆಯ ದಿನದವರೆಗೂ ಕಾದು ಸಿದ್ದರಾಮಯ್ಯ ಇಂದು ತಮ್ಮ ಸ್ಪರ್ಧೆಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರ ಆಯ್ಕೆ ಮಾಡಿಕೊಳ್ಳದೇ ತಮ್ಮ ಕ್ಷೇತ್ರವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಸಾಕಷ್ಟು ಕುತೂಹಲ ಕೆರಳಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆ ಸ್ಪರ್ಧೆ ಕೊನೆಗೂ ಅಂತಿಮವಾಗಿದ್ದು, ಕ್ಷೇತ್ರ ಆಯ್ಕೆಯನ್ನು ಹೈಕಮಾಂಡ್​ಗೆ ಬಿಟ್ಟು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

2023 ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಮುಂಚಿತವಾಗಿ ಅರ್ಜಿ ಸಲ್ಲಿಸುವಂತೆ ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿತ್ತು. ನವೆಂಬರ್ 5 ರಿಂದ 15 ರವರೆಗೆ ನೀಡಿದ ಕಾಲಾವಕಾಶ ನಂತರ ನವೆಂಬರ್ 21ಕ್ಕೆ ವಿಸ್ತರಣೆಯಾಗಿತ್ತು. ಅರ್ಜಿ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು, ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಹೆಚ್ಚಾಗಿತ್ತು.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಅರ್ಜಿ ಸಲ್ಲಿಸಿದ್ದು, ಸಿದ್ದರಾಮಯ್ಯಗೆ ಅರ್ಜಿ ಸಲ್ಲಿಸುವುದು ಅನಿವಾರ್ಯವಾಗಿತ್ತು. ದಿನಾಂಕ ವಿಸ್ತರಣೆಯ ಬಳಿಕವೂ ಕಡೆಯ ದಿನದವರೆಗೂ ಕಾದು ಸಿದ್ದರಾಮಯ್ಯ ಇಂದು ತಮ್ಮ ಸ್ಪರ್ಧೆಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರ ಆಯ್ಕೆ ಮಾಡಿಕೊಳ್ಳದೇ ತಮ್ಮ ಕ್ಷೇತ್ರವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿ ಅರ್ಜಿ ಸಲ್ಲಿಸಿದ್ದಾರೆ.

ಇಂದು ಸಂಜೆ ಸಿದ್ದರಾಮಯ್ಯ ಪರ ವೆಂಕಟೇಶ್ ಹಾಗೂ ಪ್ರಭಾಕರ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಕೊನೆಗೂ ತಮ್ಮ ಸ್ಪರ್ಧೆಯನ್ನು ಸಿದ್ದರಾಮಯ್ಯ ಖಚಿತಪಡಿಸಿದ್ದು, ಕ್ಷೇತ್ರವನ್ನು ಮಾತ್ರ ತಿಳಿಸಿಲ್ಲ. ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ ಅವರು ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ.

ಯಾವುದೇ ಕ್ಷೇತ್ರದಿಂದ ನಾನು ಕಣಕ್ಕಿಳಿಯಲು ಬಯಸಿದರೂ ಹೈಕಮಾಂಡ್ ನನಗೆ ಅವಕಾಶ ಮಾಡಿಕೊಡಲಿದೆ ಎಂದಿದ್ದರು. ಇದೀಗ ವಿಧಾನಸಭೆ ಸ್ಪರ್ಧೆಗೆ ಮುಂದಾಗಿದ್ದು, ಆಯ್ಕೆಯನ್ನು ಹೈಕಮಾಂಡ್​ಗೆ ಬಿಟ್ಟಿದ್ದಾರೆ.

ಇದನ್ನೂ ಓದಿ: ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್​ನ ನಾಲ್ವರಿಂದ ಅರ್ಜಿ.. ಸಿದ್ದರಾಮಯ್ಯ ಭೇಟಿ ಬಳಿಕ ಗರಿಗೆದರಿದ ರಾಜಕೀಯ ಚಟುವಟಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.