ETV Bharat / state

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ಸಿಎಂಗೆ ಮಾಜಿ ಸಿಎಂ ಒತ್ತಾಯ

author img

By

Published : Sep 26, 2019, 11:19 PM IST

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿಯೇ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಸುವ ಸಂಪ್ರದಾಯ ಅನುಸರಿಸಲಾಗುತ್ತಿದೆ. ಅದಕ್ಕಾಗಿ ಸುವರ್ಣಸೌಧ ನಿರ್ಮಿಸಲಾಗಿದೆ. ಆ ಸಂಪ್ರದಾಯವನ್ನು ಮುರಿಯುವುದು ಸಮಂಜಸವಲ್ಲ. ಇದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂದು ಪತ್ರದ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸಿಎಂಗೆ ಮಾಜಿ ಸಿಎಂ ಒತ್ತಾಯ

ಬೆಂಗಳೂರು: ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಉಪ ಚುನಾವಣೆ ಮುಂದೂಡಿಕೆಯಾಗಿರುವುದರಿಂದ ಬೆಳಗಾವಿಯಲ್ಲಿಯೇ ವಿಧಾನ ಮಂಡಲ ಅಧಿವೇಶನ ನಡೆಸುವಂತೆ, ಇದಕ್ಕಾಗಿ ಶೀಘ್ರವೇ ದಿನಾಂಕ ನಿಗದಿ ಪಡಿಸುವಂತೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

  • Parts of Karnataka are reeling under post-flood & drought problems with no adequate measures from the Central & State govt. People have lost everything with very little hope about their future.

    As representatives, it is our duty to instill confidence & renew their hope.
    1/2 pic.twitter.com/2fXNb3HEgH

    — Siddaramaiah (@siddaramaiah) September 26, 2019 " class="align-text-top noRightClick twitterSection" data=" ">

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದಲೇ ನಿರ್ಮಿಸಿರುವ ಬೆಳಗಾವಿಯ ಸುವರ್ಣಸೌಧದ ಬದಲಾಗಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಬೇಕೆಂದು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಸರಿಯಲ್ಲ. ಬೆಳಗಾವಿಯಲ್ಲೇ ಅಧಿವೇಶನ ನಡೆಸುವುದರಿಂದ ನೆರೆ ಪರಿಹಾರ ಕಾರ್ಯಗಳು ಸಹ ಚುರುಕಾಗುತ್ತವೆ ಎಂದಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಅತಿವೃಷ್ಟಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಲಕ್ಷಾಂತರ ಮಂದಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಹೊಲ ಗದ್ದೆ ತೋಟಗಳಿಗೆ ನೀರು ನುಗ್ಗಿ ಕೃಷಿಕರಿಗೆ ಸಂಕಷ್ಟ ಸ್ಥಿತಿ ಎದುರಾಗಿದೆ. ಪ್ರವಾಹದ ಭೀಕರತೆ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರವಾಗಿದ್ದು, ಅದರಲ್ಲಿಯೂ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಭಾರಿ ಹಾನಿಯಾಗಿದೆ. ಇತ್ತೀಚಿಗೆ ಪ್ರವಾಸ ಕೈಗೊಂಡಾಗ ಜನರ ಕಷ್ಟಗಳನ್ನು ಕಣ್ಣಾರೆ ನೋಡಿದ್ದೇನೆ. ಇದಲ್ಲದೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರದಿಂದ ಜನ ತತ್ತರಿಸಿದ್ದು ಕುಡಿವ ನೀರು ಉದ್ಯೋಗವಿಲ್ಲದೇ ಮತ್ತು ಜಾನುವಾರುಗಳಿಗೆ ಮೇವು ಸಿಗದೇ ತತ್ತರಿಸಿದ್ದಾರೆ ಎಂದಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ ಇಂಥ ಸಂದರ್ಭ ವಿಧಾನಮಂಡಲ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವುದು ಸಮಂಜಸವಲ್ಲ ಆಶಾಭಾವನೆ ಮೂಡುತ್ತದೆ ಎಂದಿದ್ದಾರೆ.

Intro:newsBody:ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ಸಿಎಂಗೆ ಮಾಜಿ ಸಿಎಂ ಒತ್ತಾಯ


ಬೆಂಗಳೂರು: ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಉಪ ಚುನಾವಣೆ ಮುಂದೂಡಿಕೆಯಾಗಿರುವುದರಿಂದ ಬೆಳಗಾವಿಯಲ್ಲಿಯೇ ವಿಧಾನ ಮಂಡಲ ಅಧಿವೇಶನ ನಡೆಸುವಂತೆ, ಇದಕ್ಕಾಗಿ ಶೀಘ್ರವೇ ದಿನಾಂಕ ನಿಗಧಿಪಡಿಸುವಂತೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಎಂದು ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದಲೇ ನಿರ್ಮಿಸಿರುವ ಬೆಳಗಾವಿಯ ಸುವರ್ಣಸೌಧದ ಬದಲಾಗಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಬೇಕೆಂದು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಸರಿಯಲ್ಲ. ಬೆಳಗಾವಿಯಲ್ಲೇ ಅಧಿವೇಶನ ನಡೆಸುವುದರಿಂದ ನೆರೆ ಪರಿಹಾರ ಕಾರ್ಯಗಳು ಸಹ ಚುರುಕಾಗುತ್ತವೆ ಎಂದಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಅತಿವೃಷ್ಟಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಲಕ್ಷಾಂತರ ಮಂದಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಹೊಲ ಗದ್ದೆ ತೋಟಗಳಿಗೆ ನೀರು ನುಗ್ಗಿ ಕೃಷಿಕರಿಗೆ ಸಂಕಷ್ಟ ಸ್ಥಿತಿ ಎದುರಾಗಿದೆ. ಪ್ರವಾಹದ ಭೀಕರತೆ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರವಾಗಿದ್ದು ಅದರಲ್ಲಿಯೂ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಭಾರಿ ಹಾನಿಯಾಗಿದೆ. ಇತ್ತೀಚಿಗೆ ಪ್ರವಾಸ ಕೈಗೊಂಡಾಗ ಜನರ ಕಷ್ಟಗಳನ್ನು ಕಣ್ಣಾರೆ ನೋಡಿದ್ದೇನೆ. ಇದಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರದಿಂದ ಜನ ತತ್ತರಿಸಿದ್ದು ಕುಡಿಯುವ ನೀರು ಉದ್ಯೋಗವಿಲ್ಲದೆ ಮತ್ತು ಜಾನುವಾರುಗಳಿಗೆ ಮೇವು ಸಿಗದೆ ತತ್ತರಿಸಿದ್ದಾರೆ ಎಂದಿದ್ದಾರೆ.
ಪ್ರವಾಹ ಪೀಡಿತರಿಗೆ ಪರಿಹಾರ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ ಇಂಥ ಸಂದರ್ಭ ವಿಧಾನಮಂಡಲ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವುದು ಸಮಂಜಸವಲ್ಲ ಆಶಾಭಾವನೆ ಮೂಡುತ್ತದೆ ಎಂದಿದ್ದಾರೆ.
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿಯೇ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಸುವ ಸಂಪ್ರದಾಯ ಅನುಸರಿಸಲಾಗುತ್ತಿದೆ. ಅದಕ್ಕಾಗಿ ಸುವರ್ಣಸೌಧವನ್ನು ನಿರ್ಮಿಸಲಾಗಿದೆ. ಆ ಸಂಪ್ರದಾಯವನ್ನು ಮುರಿಯುವುದು ಸಮಂಜಸವಲ್ಲ. ಇದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂದು ಪತ್ರದ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.