ETV Bharat / state

ಸುಡಾನ್​ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬುಡಕಟ್ಟು ಜನರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

author img

By

Published : Apr 18, 2023, 3:56 PM IST

siddaramaih-urges-bring-back-the-hakkipikki-tribes-from-sudan
ಸುಡಾನ್​ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿಪಿಕ್ಕಿ ಬುಡಕಟ್ಟು ಜನರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಸುಡಾನ್​​ನಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ರಾಜ್ಯದ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ 31 ಮಂದಿ ಸಿಲುಕಿದ್ದು, ಇವರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು : ಸುಡಾನ್​ನಲ್ಲಿ ಸೇನಾಪಡೆಗಳ ಎರಡು ಬಣಗಳ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ರಾಜ್ಯದ 31 ಮಂದಿ ಸಿಲುಕಿದ್ದು ಕೇಂದ್ರ ಸರ್ಕಾರ ಇವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ 31 ಜನರು ಅಂತರ್ಯುದ್ಧದಿಂದ ತತ್ತರಿಸಿರುವ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ತಕ್ಷಣವೇ ಮಧ್ಯಪ್ರವೇಶಿಸಿ ಸುಡಾನ್​​ನಲ್ಲಿ ಸಿಲುಕಿರುವ ಜನರ ಸುರಕ್ಷಿತ ವಾಪಸಾತಿಗೆ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಅರಿಂದಮ್ ಬಾಗ್ಚಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

  • It is reported that 31 people from Karnataka belonging to Hakki Pikki tribe, are stranded in Sudan which is troubled by civil war.

    I urge @PMOIndia @narendramodi, @HMOIndia, @MEAIndia and @BSBommai to immediately intervene & ensure their safe return.

    — Siddaramaiah (@siddaramaiah) April 18, 2023 " class="align-text-top noRightClick twitterSection" data=" ">

ಸುಡಾನ್‌ನಲ್ಲಿರುವ ಹಕ್ಕಿ ಪಿಕ್ಕಿ ಜನಾಂಗದವರು ಕಳೆದ ಕೆಲವು ದಿನಗಳಿಂದ ಆಹಾರವಿಲ್ಲದೇ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಅಂತಾರಾಷ್ಟ್ರೀಯ ಏಜೆನ್ಸಿಗಳನ್ನು ಸಂಪರ್ಕಿಸಬೇಕು. ಅವರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅರಿಯಬೇಕು ಎಂದು ಹೇಳಿದ್ದಾರೆ.

ಸುಡಾನ್‌ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಲ್ಲಿ ಒಬ್ಬ ಭಾರತೀಯ ಹಾಗೂ ಇತರ 60 ಮಂದಿಯನ್ನು ಕಳೆದುಕೊಂಡಿದ್ದೇವೆ. ಇದು ದುರದೃಷ್ಟಕರ. ಅವರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಈ ಪ್ರದೇಶದಲ್ಲಿ ಶಾಂತಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸುಡಾನ್​ ಸಂಘರ್ಷ : ಸುಡಾನ್ ಸೈನ್ಯ ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳ ನಡುವೆ ನಡೆಯುತ್ತಿರುವ ಭೀಕರ ಹೋರಾಟದಲ್ಲಿ ಸತ್ತವರ ಸಂಖ್ಯೆ 97ಕ್ಕೆ ಏರಿದೆ ಎಂದು ಸುಡಾನ್ ವೈದ್ಯರ ಒಕ್ಕೂಟವನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರದ ವೇಳೆಗೆ ಹಿಂಸಾಚಾರದಲ್ಲಿ 97 ನಾಗರೀಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 600 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ : ಆಫ್ರಿಕಾದ ಸುಡಾನ್​​ ರಾಜ್ಯದಲ್ಲಿ ಸೇನಾ ಪಡೆಗಳ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಕರ್ನಾಟಕ ರಾಜ್ಯದವರು ಸಿಲುಕಿಕೊಂಡಿದ್ದಾರೆ. ಇವರೆಲ್ಲಾ ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಅಲ್ಲಿ ತಮ್ಮ ವ್ಯಾಪಾರದ ಸಲುವಾಗಿ ಹೋಗಿದ್ದರು. ರಾಜ್ಯದ 31 ಜನ ಸಿಲುಕಿ‌ಕೊಂಡಿದ್ದು, ಇದರಲ್ಲಿ ಶಿವಮೊಗ್ಗದ 7, ಚನ್ನಗಿರಿ 5, ಮೈಸೂರು ಜಿಲ್ಲೆ ಹುಣಸೂರು 19 ಜನ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶಿವಮೊಗ್ಗದ ಹಕ್ಕಿಪಿಕ್ಕಿ ಕ್ಯಾಂಪ್​​ನ ಪ್ರಭು ಎಂಬವರು ಭಾರತ ಸರ್ಕಾರವನ್ನು ವಿನಂತಿಸಿಕೊಂಡಿದ್ದು, ನಾವು ಸುಡಾನ್ ದೇಶದ ಅಲ್ಪಶೀರ್ ಸಿಟಿಯಲ್ಲಿ ಇದ್ದೇವೆ. ಸುಮಾರು‌ 10 ದಿನದಿಂದ ನಾವು ಇಲ್ಲಿ ವಾಸವಾಗಿದ್ದೇವೆ. ನಮ್ಮ ಮನೆಯಲ್ಲಿ ಸಣ್ಣ ಸಣ್ಣ ಮಕ್ಕಳಿದ್ದಾರೆ.‌ ನಮ್ಮ ಪರಿಸ್ಥಿತಿ‌ ಕಂಡು ಕುಟುಂಬದವರು ಕಣ್ಣೀರು ಸುರಿಸುತ್ತಿದ್ದಾರೆ. ನಾವು ಇಲ್ಲಿಂದ ಹೊರಗಡೆ ಹೋಗಲು ಕಷ್ಟವಾಗಿದೆ. ಭಾರತ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ನಮ್ಮ ಸಹಾಯಕ್ಕೆ ಬರಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶೆಟ್ಟರ್ ನನ್ನ ಗುರುಗಳು, ನಾನು ಗುರುವಿನ ವಿರುದ್ಧವೇ ಸೆಡ್ಡು ಹೊಡೆದಿದ್ದೇನೆ: ಮಹೇಶ್​ ಟೆಂಗಿನಕಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.