ETV Bharat / state

ಸಿಗಂದೂರು ದೇವಸ್ಥಾನ ವಿವಾದ : ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚನೆ

author img

By

Published : Dec 15, 2020, 8:54 AM IST

ಶಿವಮೊಗ್ಗ ಜಿಲ್ಲೆಯ ಚೌಡೇಶ್ವರಿ ದೇವಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಟ್ರಸ್ಟ್​​ನ ಧರ್ಮದರ್ಶಿ ಎಸ್. ರಾಮಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ದೇವಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮೌಖಿಕ ಆದೇಶ ನೀಡಿದೆ.

siganduru chowdeshwari temple issue updates
ಸಿಗಂದೂರು ದೇವಸ್ಥಾನದಿಂದ ಅರಣ್ಯ ಒತ್ತುವರಿ ವಿವಾದ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಅಕ್ಟೋಬರ್ 23ರಂದು ದೇವಾಲಯಕ್ಕೆ ಸಲಹಾ ಸಮಿತಿ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿರುವುದನ್ನು ಪ್ರಶ್ನಿಸಿ ದೇವಸ್ಥಾನದ ಟ್ರಸ್ಟ್​​ನ ಧರ್ಮದರ್ಶಿ ಎಸ್. ರಾಮಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ. ಎಸ್. ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯಪೀಠ ಈ ಮೌಖಿಕ ಆದೇಶ ನೀಡಿದೆ.

ಅರ್ಜಿ ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಕೋರಿಕೆ ಮನ್ನಿಸಿದ ಪೀಠ, ಆಕ್ಷೇಪಣೆಗಳನ್ನು ಸಲ್ಲಿಸುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ದೇವಾಲಯದ ಹಣವನ್ನು ಟ್ರಸ್ಟ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದೆ ಎಂದು ಆರೋಪಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಈ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ವಸ್ತುಸ್ಥಿತಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲಾಕಾರಿ, ದೇವಾಲಯದ ದೈನಂದಿನ ಆಡಳಿತ ನಿರ್ವಹಣೆಗೆ ಸಲಹಾ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಲಂಚಕ್ಕೆ ಬೇಡಿಕೆಯಿಟ್ಟ ಆರೋಪ: ಬಿಬಿಎಂಪಿ ಅಧಿಕಾರಿ ಎಸಿಬಿ ಬಲೆಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.