ETV Bharat / state

ಸಿಂದಗಿ ದಲಿತ ಯುವಕನ ಹತ್ಯೆ ಆರೋಪಿ ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

author img

By

Published : Aug 28, 2020, 1:29 PM IST

ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆಯನ್ನು ಖಂಡಿಸಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Sindagai Dalit murder accused must be arrested immediately: Siddaramiah
ಸಿಂದಗಿ ದಲಿತ ಯುವಕನ ಹತ್ಯೆ ಆರೋಪಿ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆಯನ್ನು ಖಂಡಿಸಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Sindagai Dalit murder accused must be arrested immediately: Siddaramiah
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯ ಕುಲ ತಲೆ ತಗ್ಗಿಸುವಂತಹದ್ದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Sindagai Dalit murder accused must be arrested immediately: Siddaramiah
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಸಿಎಂ ಬಿಎಸ್​ವೈ ನೀಡುತ್ತಿರುವ ಬೆಂಬಲವೇ ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ,‌ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ನೀಡುತ್ತಿರುವ ಬೆಂಬಲವೇ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಎಂದು ನೇರವಾಗಿ ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.