ETV Bharat / state

ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

author img

By

Published : Sep 24, 2022, 4:53 PM IST

Somasekar should not share the stage with the President in Dasara
ಕೆ.ಮಥಾಯಿ

ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ ವೇದಿಕೆ ಹಂಚಿ ಕೊಳ್ಳಬಾರದು ಎಂದು ರಾಜ್ಯಪಾಲರಿಗೆ ಆಮ್​ ಆದ್ಮಿ ಪಾರ್ಟಿ ಮನವಿ ಸಲ್ಲಿಸಿದೆ.

ಬೆಂಗಳೂರು: ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ ಅವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿ ರಾಜರುಗಳು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು ಎಂದು ಹೇಳಿದರು.

ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ ಅವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕು ಎಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ ಎಂದರು.

567 ಕೋಟಿ ರೂಪಾಯಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ : ಈ ಸಂದರ್ಭದಲ್ಲಿ ಹಾಜರಿದ್ದ ಸಂಘಟನ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 567 ಕೋಟಿ ರೂಪಾಯಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ.

29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವರು ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು ಎಂದು ಹೇಳಿದರು. ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು , ವಿಶ್ವನಾಥ್, ವೇಣುಗೋಪಾಲ್ , ಮಹೇಶ್ ಬಾಬು ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ : 2006ರಿಂದ ಇಲ್ಲಿಯವರೆಗೆ ನಡೆದ ಎಲ್ಲ ಹಗರಣಗಳ ನ್ಯಾಯಾಂಗ ತನಿಖೆ ನಡೆಸಿ: ಸಿದ್ದರಾಮಯ್ಯ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.