ETV Bharat / state

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಶಾಸಕಿ ಸೌಮ್ಯ ರೆಡ್ಡಿ ರಾಜೀನಾಮೆ

author img

By

Published : Mar 21, 2020, 5:47 PM IST

ರಾಜೀನಾಮೆ ಸಂಬಂಧ ಸೌಮ್ಯ ರೆಡ್ಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಆನಂದ್​​ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಹುಬ್ಬಳ್ಳಿ - ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರದಲ್ಲಿ ಬೇಸರವಾಗಿದೆ ಎಂದು ಉಲ್ಲೇಖಿಸಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Soumya Reddy
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಶಾಸಕಿ ಸೌಮ್ಯ ರೆಡ್ಡಿ ರಾಜೀನಾಮೆ

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಸರ್ಕಾರ ಅಸ್ತು ಎಂದಿದ್ದಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

Soumya Reddy
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಶಾಸಕಿ ಸೌಮ್ಯ ರೆಡ್ಡಿ ರಾಜೀನಾಮೆ

ರಾಜೀನಾಮೆ ಸಂಬಂಧ ಸೌಮ್ಯ ರೆಡ್ಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಆನಂದ್​​ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಹುಬ್ಬಳ್ಳಿ - ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರದಲ್ಲಿ ಬೇಸರವಾಗಿದೆ ಎಂದು ಉಲ್ಲೇಖಿಸಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೇ ವಿಚಾರವಾಗಿ ಮಾರ್ಚ್ 9ರಂದು ನಡೆದ ಸಭೆಯಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ವಿಚಾರ ಕೈಬಿಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು. ಆದ್ರೆ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಬಿಎಸ್​​ವೈ ನೇತೃತ್ವದ ಸಭೆಯಲ್ಲಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕಾಣದ ಕೈಗಳ ರಾಜಕೀಯ ಒತ್ತಡದಿಂದ ಈ ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಶಾಸಕಿ ಸೌಮ್ಯ ರೆಡ್ಡಿ ಆರೋಪ ಮಾಡಿದ್ದಾರೆ.

ಇದಲ್ಲದೆ ನಿನ್ನೆ ನಡೆದ ಸಭೆಗೆ ಅರಣ್ಯ ಸಚಿವ ಆನಂದ್​​ ಸಿಂಗ್ ಅವರೇ ಗೈರಾಗಿದ್ದಾರೆ. ಈ ವಿಷಯವನ್ನು ಎಲ್ಲರೂ ಒಮ್ಮತದಿಂದ ನಿರ್ಧರಿಸಬೇಕಾಗಿತ್ತು. ಈ ಯೋಜನೆಗೆ ನಿನ್ನೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದರಿಂದ ಮರಗಳು ನಾಶವಾಗಲಿವೆ. ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಪ್ರಯೋಜನ ಇಲ್ಲದಂತಾಗಿದೆ. ಹೀಗಾಗಿ ನಾನು ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶಾಸಕಿ ಸೌಮ್ಯ ರೆಡ್ಡಿ ಪತ್ರ ಬರೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.